ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿಯೊಂದಿಗೆ ಕೃಷಿ ಸಂವಾದ: ಯಲ್ಲಾಪುರದ ಲತಾ ಹೆಗಡೆ ಆಯ್ಕೆ

Published 15 ಜೂನ್ 2024, 14:14 IST
Last Updated 15 ಜೂನ್ 2024, 14:14 IST
ಅಕ್ಷರ ಗಾತ್ರ

ಯಲ್ಲಾಪುರ: ತಾಲ್ಲೂಕಿನ ಉಪಳೇಶ್ವರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಂಬೇಸಾಲ ಗ್ರಾಮದ ಲತಾ ರಾಜೀವ ಹೆಗಡೆ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯದ ಸಹಯೋಗದಲ್ಲಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜೂನ್‌ 18ರಂದು ಪ್ರಧಾನ ಮಂತ್ರಿ ಜೊತೆಗೆ ನೈಸರ್ಗಿಕ ಕೃಷಿ ವಿಷಯದ ಕುರಿತು ಸಂವಾದ ನಡೆಸಲು ಆಯ್ಕೆಯಾಗಿದ್ದಾರೆ.‌

ನೈಸರ್ಗಿಕ ಕೃಷಿ ತರಬೇತಿ ಪಡೆದ ಕೃಷಿ ಸಖಿಯರಿಗೆ ಈ ಅವಕಾಶ ಕಲ್ಪಿಸಲಾಗಿದ್ದು ಕರ್ನಾಟಕ ರಾಜ್ಯದಿಂದ ಇಬ್ಬರು ಕೃಷಿ ಸಖಿಯರನ್ನು ಸಂವಾದಕ್ಕೆ ಆಯ್ಕೆ ಮಾಡಲಾಗಿದೆ. ಲತಾ ಹೆಗಡೆ ಅವರು ತಮ್ಮ ಪತಿಯೊಂದಿಗೆ ನೈಸರ್ಗಿಕ ಪುಷ್ಪಕೃಷಿ, ಪಶು ಆಹಾರ ತಯಾರಿಕೆ, ಹೈನುಗಾರಿಕೆ ಮುಂತಾದ ಕೃಷಿ ಸಂಬಂಧಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದು ಉಪಳೇಶ್ವರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೃಷಿ ಸಖಿಯಾಗಿ ಗ್ರಾಮೀಣ ಪ್ರದೇಶದ ರೈತರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT