ಯಲ್ಲಾಪುರ: `ಅಕ್ಕ ಕೆಫೆ’ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ. ಹಳ್ಳಿಯಿಂದ ಬರುವ ಬಡವರಿಗಾಗಿ ಇಲ್ಲಿ ಉತ್ತಮ ಗುಣಮಟ್ಟದ ಊಟೋಪಚಾರ ವ್ಯವಸ್ಥೆ ಸಿಗಲಿದೆ. ಸ್ವಸಹಾಯ ಸಂಘದ ಸದಸ್ಯರಿಗೆ ಉದ್ಯೋಗ ಸೃಷ್ಟಿ ಆಗಲಿದೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದ ಇಂದಿರಾ ಕ್ಯಾಂಟೀನ್ ಸಮೀಪ ಮಂಗಳವಾರ ‘ಅಕ್ಕ ಕೆಫೆ’ (ಪ್ರೀಮಿಯಂ ಮಾದರಿಯಲ್ಲಿ) ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಸ್ವಸಹಾಯ ಸಂಘಗಳು ಸ್ವಾವಲಂಬಿ ಆಗುವಲ್ಲಿ ಈ ಯೋಜನೆ ಸಹಾಯಕ. ಒಂದೂವರೆ ತಿಂಗಳಿನಲ್ಲಿ ಈ ಕಟ್ಟಡ ಪೂರ್ತಿಗೊಳಿಸಿ ಅಕ್ಕ ಕೆಫೆ ಉದ್ಘಾಟನೆಯಾಗಬೇಕು’ ಎಂದು ಗುತ್ತಿಗೆದಾರರಿಗೆ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಇಒ ರಾಜೇಶ ಧನವಾಡಕರ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ, ಪ್ರಮುಖರಾದ ವಿಜಯ ಮಿರಾಶಿ, ವಿ.ಎಸ್.ಭಟ್ಟ, ಜಗದೀಶ ನಾಯಕ, ಗುರುಪ್ರಸಾದ ಅಂಕೋಲೆಕರ, ಮಂಜಣ್ಣ ಬಿ, ರಾಜಾರಾಮ ವೈದ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-20-801617573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.