ಯಲ್ಲಾಪುರ: ಸಹಕಾರ ಸಂಘಗಳು ಗ್ರಾಮೀಣ ಜನರ ಬದುಕನ್ನು ಎತ್ತರಿಸುವ ಪ್ರಯತ್ನ ಮಾಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ತಾಲ್ಲೂಕಿನ ಮಂಚಿಕೇರಿಯಲ್ಲಿ ಈಚೆಗೆ ಹಾಸಣಗಿ ಸೊಸೈಟಿಯ ನೂತನ ಗೋದಾಮು ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಅವಲಂಬಿತರನ್ನು ಮೇಲಕ್ಕೆತ್ತುವ ಕೆಲಸ ಸಹಕಾರಿಗಳಿಂದ ಆಗಬೇಕು. ಹಳ್ಳಿಗಳು ಬರಿದಾಗಿ ಶಹರ ಬೆಳೆಯುತ್ತಿದೆ. ನಮ್ಮ ಅಗತ್ಯಗಳನ್ನು ನಿಯಂತ್ರಿಸಿಕೊಳ್ಳದೇ ಹೋದರೆ ಈ ರೀತಿ ನಗರೀಕರಣ, ವಲಸೆ ಜೀವನ ಬೆಳೆಯುತ್ತದೆ. ಇದರ ನಿಯಂತ್ರಣಕ್ಕಾಗಿ ನಾವು ಆಸೆಯನ್ನು ಇತಿಮಿತಿಯಲ್ಲಿ ಇಟ್ಟುಕೊಳ್ಳಬೇಕು. ಗ್ರಾಮೀಣ ಬದುಕಿನ ಕಷ್ಟಗಳನ್ನು ಜಯಿಸುವ ಸಾಮರ್ಥ್ಯ ತಂದುಕೊಳ್ಳಬೇಕು ಎಂದರು.

ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ರೈತರು ಮತ್ತು ಸಹಕಾರ ಕ್ಷೇತ್ರ ಜೊತೆ ಜೊತೆಯಾಗಿ ಸಾಗಬೇಕು. ಈ ಭಾಗದಲ್ಲಿ ಸಹಕಾರ ಕ್ಷೇತ್ರ ರೈತರ ಬೆನ್ನೆಲುಬಾಗಿದೆ. ರೈತರಿಂದ ಬೆಳೆದ ಸಹಕಾರಿಗಳು ಹಾನಿ ಲಾಭ ಲೆಕ್ಕಾಚಾರ ಮಾಡಬಾರದು. ಅಡಿಕೆ ಬೆಳೆಗಾರರು ಪರ್ಯಾಯ ಬೆಳೆ, ಎಲೆಚುಕ್ಕೆ ಬಗ್ಗೆ ಗಮನ ಹರಿಸಬೇಕು ಎಂದರು.

ಸೊಸೈಟಿ ಅಧ್ಯಕ್ಷ ಆರ್.ಎನ್. ಹೆಗಡೆ ಗೋರ್ಸಗದ್ದೆ ಅಧ್ಯಕ್ಷತೆ ವಹಿಸಿದ್ದರು.

ಸಹಕಾರಿಗಳಾದ ಜಿ.ವಿ. ಹೆಗಡೆ ಹಿತ್ಲಳ್ಳಿ, ಎಂ.ಜಿ. ಭಟ್ಟ ಸಂಕದಗುಂಡಿ, ಹೇರಂಭ ಹೆಗಡೆ ಕುಂದರಗಿ, ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ನೇತ್ರೇಕರ್, ಸಹಾಯಕ ನಿಬಂಧಕ ಅಜಿತ್ ಶಿರಹಟ್ಟಿ ಇದ್ದರು.

ಟಿ.ವಿ. ಹೆಗಡೆ ಬೆದೆಹಕ್ಲು ಸ್ವಾಗತಿಸಿದರು. ರಶ್ಮಿ ಹೆಗಡೆ ನಿರ್ವಹಿಸಿದರು. ಜಿ.ಎನ್. ಭಟ್ಟ ಸಂದೇಶ ವಾಚಿಸಿದರು. ಗೋಪಾಲಕೃಷ್ಣ ನಂದಿಸರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-20-329676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.