ಯಲ್ಲಾಪುರ: ‘ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಮಾಡದೆ, ಅಗತ್ಯ ಇದ್ದವರ ಸಹಾಯ ಪಡೆದುಕೊಂಡು, ಅವರ ಶಕ್ತಿ, ಸಾಮರ್ಥ್ಯ ಬಳಸಿಕೊಂಡು ಅಭಿವೃದ್ಧಿಗೆ ನಿರಂತರ ಪ್ರಯತ್ನಿಸುತ್ತಿದ್ದೇನೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ತಾಲ್ಲೂಕಿನ ಮಾಗೋಡ ಕ್ರಾಸ್ ನಿಂದ ಅಣಲಗಾರ ದೇವಸ್ಥಾನದ ವರೆಗಿನ ₹9.90 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಅಣಲಗಾರದಲ್ಲಿ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಕ್ಷೇತ್ರದ ಅಭಿವೃದ್ಧಿ ಮಾಡುವುದು ಜನಪ್ರತಿನಿಧಿ ಆದವರ ಕರ್ತವ್ಯವೂ ಹೌದು. ಆದರೆ, ಅಭಿವೃದ್ಧಿ ಮಾಡಿದಾಗ ಅದನ್ನು ಕೃತಜ್ಞತೆಯಿಂದ ಸ್ಮರಿಸಿಕೊಳ್ಳುವ ಸೌಜನ್ಯವನ್ನು ಜನರು ಹೊಂದುವುದು ಅಪೇಕ್ಷಣೀಯ’ ಎಂದರು.

ನಂದೊಳ್ಳಿ ಹಾಗೂ ಚಂದಗುಳಿ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹಂತಹಂತವಾಗಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಸಮಿತಿಯಿಂದ ಶಾಸಕರನ್ನು ಗೌರವಿಸಲಾಯಿತು. ಹಿರಿಯರಾದ ರಾಮಕೃಷ್ಣ ಭಟ್ಟ ಬಿದ್ರೆಪಾಲ್, ತಿಮ್ಮಣ್ಣ ಭಾಗ್ವತ್ ನಂದೊಳ್ಳಿ, ಸ್ವರ್ಣವಲ್ಲೀ ಮಠದ ಸೀಮಾಧ್ಯಕ್ಷ ನಾಗೇಶ ಹೆಗಡೆ ಪಣತಗೇರಿ, ವಿಕಾಸ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ, ಪಿಡಿಒ ಅರವಿಂದ ಪಾಟೀಲ್, ಎಲ್.ಎಸ್.ಎಂಪಿ ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೆರೆ, ಪ್ರಮುಖರಾದ ವಿದ್ವಾನ್ ಶಂಕರ ಭಟ್ಟ ಬಾಲಿಗದ್ದೆ, ಟಿ.ಆರ್. ಹೆಗಡೆ ತೊಂಡೆಕೆರೆ, ವಿ.ಎಸ್. ಭಟ್ಟ ಉಪಳೇಶ್ವರ, ಪರೀಕ್ಷಿತ ನಾಯಕ, ವಿಶ್ವನಾಥ ಭಟ್ಟ ಇದ್ದರು.

ಟಿ.ವಿ. ಭಾಗ್ವತ ಸ್ವಾಗತಿಸಿದರು. ಎನ್.ಆರ್. ಭಟ್ಟ ಬಿದ್ರೆಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೋಕೋಪಯೋಗಿ ಇಲಾಖೆಯ ಎಇಇ ಸಂಜೀವ ಪಾತ್ರೋಟ ರಸ್ತೆ ಕಾಮಗಾರಿ ಕುರಿತು ವಿವರಿಸಿದರು. ಶ್ರೀಧರ ಅಣಲಗಾರ ನಿರ್ವಹಿಸಿದರು. ಗಣೇಶ ಹೆಗಡೆ ನಂದೊಳ್ಳಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-20-1163417522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.