ಯಲ್ಲಾಪುರ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್–ಡೀಸೆಲ್ ದರ ಏರಿಕೆ ಖಂಡಿಸಿ ತಾಲ್ಲೂಕು ಯುವ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ಪಟ್ಟಣದ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ ಮಾತನಾಡಿ, ‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರಕ್ಕೊಳಗಾಗಿದೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಕನಸುಗಳಿಗೆ ಧಕ್ಕೆಯಾಗಿದೆ’ ಎಂದು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ ಮಾತನಾಡಿ, ‘ನೀಟ್ ಪ್ರಶ್ನೆ ಪತ್ರಿಕೆ ಹಗರಣ ಕೇಂದ್ರದ ವೈಫಲ್ಯಕ್ಕೆ ಸಾಕ್ಷಿ’ ಎಂದರು.

ಪ್ರಮುಖರಾದ ವಿಜಯ ಮಿರಾಶಿ, ಎನ್.ಕೆ.ಭಟ್, ರವಿ ಭಟ್ ಬರಗದ್ದೆ, ನರಸಿಂಹ ನಾಯ್ಕ, ಉಲ್ಲಾಸ ಶಾನಭಾಗ, ಫೈರೋಜ್ ಶೇಖ್, ಅಮೋಧ ಶಿರಸಿಕರ್, ವಿಶ್ವಾಸ್ ನಾಯ್ಕ, ಗಣೇಶ ಹೆಗಡೆ, ಮಹೇಶ್ ನಾಯ್ಕ, ಪೂಜಾ ನೇತ್ರೇಕರ, ಸರಸ್ವತಿ ಗುನಗಾ, ಮುಷರತ್ ಖಾನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-20-1370262814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.