ಯಲ್ಲಾಪುರ: ಪಟ್ಟಣದ ಈಶ್ವರೀ ವಿಶ್ವವಿದ್ಯಾಲಯದ ತಪೋವನದಲ್ಲಿ ಜೂನ್ 6, 7ರಂದು ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ ಕರಿ ಹೇಳಿದರು.

ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಭಾಗವಹಿಸಲು ಆಸಕ್ತರು ಅನಿಲ ಕರಿ (9845329306), ಯೋಗ ಶಿಕ್ಷಕ ಸುಬ್ರಾಯ ಭಟ್ಟ (9482185480), ದಿವಾಕರ ಮರಾಠಿ (9480085532) ಈ ಸಂಖ್ಯೆಯನ್ನು ಸಂಪರ್ಕಿಸಿ ಮೇ 31 ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಜೂನ್ 6ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಶಿವರಾಮ ಹೆಬ್ಬಾರ ಕಾರ್ಯಕ್ರಮ ಉದ್ಘಾಟಿಸುವರು.

ರಾಜ್ಯ ಘಟಕದ ಅಧ್ಯಕ್ಷ ಪಿ.ಎನ್. ಗಣೇಶಕುಮಾರ ಅಧ್ಯಕ್ಷತೆ ವಹಿಸುವರು. ಅಸೋಸಿಯೇಷನ್ ಚೇರ್ಮನ್ ಜಿ.ಎನ್.ಕೃಷ್ಣಮೂರ್ತಿ ಭಾಗವಹಿಸುವರು. ಮುಕ್ತಾ ಶಂಕರ ಗಮಕ ವಾಚನಕಾರರಾಗಿ ಮತ್ತು ಡಿ.ಕೆ. ಗಾಂವ್ಕರ ವ್ಯಾಖ್ಯಾನಕಾರರಾಗಿ ಭಾಗವಹಿಸುವರು. ಸಂಜೆ ಸಮಾರೋಪ ನಡೆಯಲಿದ್ದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳುವರು ಎಂದರು.

ಯೋಗಾಸನ ಸ್ಪರ್ಧಾ ಸ್ವಾಗತ ಸಮಿತಿಯ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಕಾರ್ಯಾಧ್ಯಕ್ಷ ಶಂಕರ ಭಟ್ಟ ತಾರೀಮಕ್ಕಿ, ಪ್ರಧಾನ ಕಾರ್ಯದರ್ಶಿ ಸುಬ್ರಾಯ ಭಟ್ಟ ಆನೇಜಡ್ಡಿ, ಸ್ವಾಗತ ಸಮಿತಿಯ ಪ್ರಮುಖರಾದ ಡಿ.ಎನ್.ಗಾಂವ್ಕರ, ಕನಕಪ್ಪ, ಕೆ.ಟಿ.ಹೆಗಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-20-1737163043

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.