ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಡಗೋಡ: ಕಾರು ಅಪಘಾತ, ಅಸ್ವಸ್ಥಗೊಂಡ ಮಾಜಿ ಶಾಸಕ ವಿ.ಎಸ್‌.ಪಾಟೀಲ

Published 8 ಮಾರ್ಚ್ 2024, 11:50 IST
Last Updated 8 ಮಾರ್ಚ್ 2024, 11:50 IST
ಅಕ್ಷರ ಗಾತ್ರ

ಮುಂಡಗೋಡ: ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ವಿ.ಎಸ್‌.ಪಾಟೀಲ ಅವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತಾಲ್ಲೂಕಿನ ಹಾರವಳ್ಳಿ ಸನಿಹ ರಸ್ತೆ ಪಕ್ಕದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ವಿ.ಎಸ್.ಪಾಟೀಲ ಅವರಿಗೆ ಎದೆಯ ಭಾಗದಲ್ಲಿ ಅಲ್ಪ ಪ್ರಮಾಣದ ನೋವು ಕಾಣಿಸಿಕೊಂಡಿದ್ದರಿಂದ, ಕೂಡಲೇ ಇಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬನವಾಸಿಯಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಶುಕ್ರವಾರ ಪಾಲ್ಗೊಂಡು, ಪಾಳಾ-ರಾಮಾಪುರ ಮಾರ್ಗವಾಗಿ ಮನೆಗೆ ಮರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನ ಏರ್‌ಬ್ಯಾಗ್‌ ತೆರೆದುಕೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ. ಚಾಲಕನ ಕಣ್ಣಿನ ಭಾಗಕ್ಕೆ ಗಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT