ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಟ್ಕಳ: ಡೆಂಗಿ ಜ್ವರದಿಂದ ಯುವಕ ಸಾವು

Published 1 ಫೆಬ್ರುವರಿ 2024, 6:25 IST
Last Updated 1 ಫೆಬ್ರುವರಿ 2024, 6:25 IST
ಅಕ್ಷರ ಗಾತ್ರ

ಭಟ್ಕಳ: ತಾಲ್ಲೂಕಿನ ಬಂದರ್‌ ನಿವಾಸಿ ಪ್ರಜ್ವಲ್‌ ಖಾರ್ವಿ(24) ಭಾನುವಾರ ಡೆಂಗಿ ಜ್ವರದಿಂದ ಮೃತಪಟ್ಟಿದ್ದಾರೆ. ತಾಲ್ಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್ ಇದನ್ನು ದೃಢಿಕರಿಸಿದ್ದಾರೆ.

ಮೀನುಗಾರಿಕೆ ವೃತ್ತಿ ಮಾಡುತ್ತಿದ್ದ ಅವರು ರಾಜ್ಯ ಮಟ್ಟದ ಕಬಡ್ಡಿ ಆಟಗಾರರಾಗಿದ್ದರು. ಕಳೆದ ಹತ್ತು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಭಟ್ಕಳ ಪಟ್ಟಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡೆಂಗಿ ಪ್ರಕರಣ ಕಂಡು ಬಂದಿವೆ. ಭಟ್ಕಳದಲ್ಲಿ ಇದು ಮೊದಲ ಪ್ರಕರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT