‘ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳು ತಮ್ಮ ಆಧಾರ್ ಕಾರ್ಡ್ ಪಡಿತರ ಚೀಟಿ ಮೊಬೈಲ್ ಫೋನ್ ಸಂಖ್ಯೆ ನೀಡಿ ಗಣತಿ ಕಾರ್ಯಕ್ಕೆ ಸಹಕರಿಸಬೇಕು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು; 08382 229857 9483511015 ಅಥವಾ ರಾಜ್ಯ ಮಟ್ಟದ ಸಹಾಯವಾಣಿ 080 22634300 ಸಂಪರ್ಕಿಸಬಹುದು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.