ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಪೂ ಕಾಲೇಜು ನೌಕರರ ಬೇಡಿಕೆ ಪರಿಶೀಲನೆ

Last Updated 5 ಫೆಬ್ರುವರಿ 2011, 7:00 IST
ಅಕ್ಷರ ಗಾತ್ರ

ಕಾರವಾರ: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ನೀತಿ ಜಾರಿಯಾಗುವ ಹಿನ್ನೆಲೆಯಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ವಿದ್ಯಾರ್ಥಿಗಳಲ್ಲಿ ಆಧುನಿಕ ಅವಶ್ಯಕತೆಯ ಶಿಕ್ಷಣ, ರಾಷ್ಟ್ರಾಭಿಮಾನ, ಆತ್ಮವಿಶ್ವಾಸದ ವ್ಯಕ್ತಿತ್ವ ತುಂಬಲು ಪ್ರಯತ್ನಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಕರೆ ನೀಡಿದರು.

ನಗರದ ರಂಗಮಂದಿರದಲ್ಲಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹಾಗೂ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿಯ ದುರ್ಗಾದೇವಿ ಪದವಿಪೂರ್ವ ಕಾಲೇಜುಗಳ ಆಶ್ರಯದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಮಹಾವಿದ್ಯಾಲಯಗಳ ನೌಕರರ ಶೈಕ್ಷಣಿಕ ಸಮ್ಮೇಳನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ನಿವೃತ್ತರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪದವಿಪೂರ್ವ ಮಹಾವಿದ್ಯಾಲಯಗಳಲ್ಲಿರುವ ಎಲ್ಲಾ ಪ್ರಾಚಾರ್ಯರು, ಉಪನ್ಯಾಸಕರು ಮತ್ತು ವಿವಿಧ ವೃಂದದ ನೌಕರರ ಸಂಘಟನೆಗಳು ಹುದ್ದೆಗೊಂದರಂತೆ ಆಗಬಾರದು, ಒಂದೇ ಸಂಘಟನೆಯಡಿಯಲ್ಲಿ ಎಲ್ಲರ ಕ್ಷೇಮಾಭಿವೃದ್ಧಿಯಾಗುವಂತೆ ಚರ್ಚಿಸಿ ಸಹಮತಕ್ಕೆ ಬರಬೇಕು ಎಂದು ಸಚಿವರು ಸಲಹೆ ಮಾಡಿದರು.

ಪದವಿಪೂರ್ವ ಮಹಾವಿದ್ಯಾಲಯಗಳ ನೌಕರರ ಬೇಡಿಕೆಗಳನ್ನು ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಪರಿಶೀಲನೆ ಮಾಡಿ ಸಾಧ್ಯವಾದಷ್ಟುಮಟ್ಟಿಗೆ ಅವುಗಳನ್ನು ಪರಿಗಣಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ರಾಜ್ಯದಲ್ಲಿ ಒಂದು ಸಾವಿರ ಐ.ಟಿ.ಐ ಕಾಲೇಜುಗಳನ್ನು ಪ್ರಾರಂಭಿಸಲಾಗುತ್ತಿದೆ. ಇದರಿಂದಾಗಿ ಆಧುನಿಕ ಬೇಡಿಕೆಯಂತೆ ವಿದ್ಯಾರ್ಥಿಗಳಲ್ಲಿ ಕೌಶಲತೆ ಬೆಳೆಸಿ ಸಂಪನ್ಮೂಲ ವ್ಯಕ್ತಿಗಳನ್ನಾಗಿ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಏಕ ಮಾತ್ರ ಸಂಫಟನೆಯನ್ನು ಬಲಪಡಿಸುವ ಮೂಲಕ ಅವಶ್ಯವಾದ ಬೇಡಿಕೆ ಈಡೇರಿಕೊಳ್ಳಲು ಮತ್ತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರಯತ್ನಿಸುವ ಕೆಲಸ ಆಗಬೇಕಾಗಿದೆ. ತನ್ಮೂಲಕ ಗುಣಮಟ್ಟದ ಶಿಕ್ಷಣ ನೀಡಿ ಸರ್ಕಾರದ ಆಶೋತ್ತರಗಳನ್ನು ನೆರವೇರಿಸಬೇಕು ಎಂದರು ಕಿವಿ ಮಾತು ಹೇಳಿದರು.

ಬಾಪೂಜಿ ಗ್ರಾಮೀಣ ವಿಕಾಸ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿಸಚಿವ ಪ್ರಭಾಕರ ಎಸ್.ರಾಣೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ, ಡಾ. ಎಚ್.ಕೆ.ಶೇಖರಪ್ಪ, ಪ್ರಕಾಶ ರಾಣೆ, ಡಿ.ಆರ್.ನಾಯ್ಕ, ಡಿ.ಕೆ.ನಾಯ್ಕ ಉಪಸ್ಥಿತರಿದ್ದರು.ಪ್ರಾಚಾರ್ಯರ ಸಂಘದ ಅಧ್ಯಕ್ಷ ಎಮ್.ಎಸ್.ಲಮಾಣಿ ಸ್ವಾಗತಿಸಿದರು. ಉಪಾಧ್ಯಕ್ಷ ಎಸ್.ಜಿ.ಭಟ್ಟ ಪ್ರಾಸ್ತಾವಿಕ ಮಾತನಾಡಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT