ಶಿರಸಿ: `ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬಿಸಿಯೂಟ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಬೇಕಾದ ಸಿಲಿಂಡರ್ಗಳ ಕೊರತೆ ಎದುರಾಗಿದ್ದು, ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು~ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ತಾಲ್ಲೂಕಿನ ಇಸಳೂರಿನ ಪ್ರೌಢಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, `ಕೇಂದ್ರ ಸರ್ಕಾರ ಸಿಲಿಂಡರ್ಗಳ ಮೇಲೆ ಮಿತಿ ಹೇರಿರುವ ಪರಿಣಾಮ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಬೇಕಾದ ಪ್ರಮಾಣದಲ್ಲಿ ಅಡುಗೆ ಸಿಲಿಂಡರ್ಗಳು ಸಿಗುತ್ತಿಲ್ಲ~ ಎಂದರು.

`ಸಿಲಿಂಡರ್ ಮಿತಿ ಕುರಿತು ಹಿಂದೆ ಸಭೆ ನಡೆದ ಸಂದರ್ಭದಲ್ಲಿ ಸಮಸ್ಯೆ ಪರಿಹರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆ ಭರವಸೆಯನ್ನು ಸರ್ಕಾರ ಇಲ್ಲಿಯವರೆಗೆ ಈಡೇರಿಸಿಲ್ಲ~ ಎಂದರು.

`ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆ ಪ್ರೌಢಶಾಲೆಗಳಲ್ಲಿ ಅನುಷ್ಠಾನ ಆಗುತ್ತಿರುವುದರಿಂದ ಪ್ರೌಢಶಾಲೆಗಳಿಗೂ ಪ್ರಾಮುಖ್ಯತೆ ಬಂದಿದೆ. ರಾಜ್ಯದಲ್ಲಿ ಯೋಜನೆಯನ್ನು ಉತ್ತಮ ರೀತಿ ಅನುಷ್ಠಾನ ಮಾಡಲಾಗುತ್ತಿದೆ. 8ನೇ ತರಗತಿ ಅಥವಾ 14ನೇ ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ~ ಎಂದರು.

`ಈ ಯೋಜನೆಯನ್ನು 10ನೇ ತರಗತಿ ಅಥವಾ 16ನೇ ವರ್ಷದವರೆಗೆ ಹೆಚ್ಚಿಸಲು ಕೇಂದ್ರದ ಮುಂದೆ ಬೇಡಿಕೆ ಸಲ್ಲಿಸಿದ್ದೇವೆ. ನೂತನ ಶಿಕ್ಷಣ ಮಂತ್ರಿಗಳು ಈ ಬಗ್ಗೆ ಗಮನ ನೀಡುತ್ತಾರೆ ಎನ್ನುವ ಭರವಸೆ ಇದೆ~ ಎಂದ ಸಚಿವರು, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಯೋಜನೆಗೆ ಕೇಂದ್ರ ಸರ್ಕಾರ ನೀಡುವ ಸಹಾಯಧನ ಈವರೆಗೆ ಸಂದಾಯವಾಗಿಲ್ಲ. ಈ ವಿಷಯವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುವುದು~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.