ಕಾರವಾರ: ‘ವಿಜ್ಞಾನ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಸರ್ಕಾರದಿಂದ ಬೆಂಬಲ ಸಿಗುತ್ತಿಲ್ಲ. ಹೀಗಾಗಿ ಭಾರತದಲ್ಲಿ ವಿಜ್ಞಾನ ಅಧ್ಯಯನ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ಸಿಗದೇ ಕೆಲ ಪ್ರತಿಭೆಗಳು ಪಕ್ವವಾಗುವ ಮೊದಲೇ ಕಮರಿ ಹೋಗುತ್ತಿವೆ’ ಎಂದು ನಿವೃತ್ತ ಪ್ರಾಂಶುಪಾಲ ಎ.ಕೆ. ಶೆಣೈ ಹೇಳಿದರು.

‘ವಿಶ್ವ ವಿಜ್ಞಾನ ದಿನಾಚರಣೆ’ಯ ನಿಮಿತ್ತ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಅವರು ಉಪನ್ಯಾಸ ನೀಡಿದರು.

‘ಭಾರತದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಉನ್ನತ ಶಿಕ್ಷಣದ ಸೌಲಭ್ಯಗಳ ಕೊರತೆ ಇದೆ. ಇದರಿಂದ ಹೆಚ್ಚಿನ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುವ ಭಾರತೀಯರು ಅಲ್ಲಿಯೇ ಉಳಿದುಬಿಡುತ್ತಿದ್ದಾರೆ. ವಿದೇಶದಲ್ಲಿ ರುವ ಹೆಚ್ಚಿನ ಭಾರತೀಯರು ತಮ್ಮ ಸಾಧನೆಯಿಂದಲೇ ವಿಶ್ವದ ಗಮನ ಸೆಳೆಯುತ್ತಿದ್ದಾರೆ. ಇದರಿಂದ ದೇಶಕ್ಕೆ ಭಾರಿ ನಷ್ಠ ಉಂಟಾಗುತ್ತದೆ. ಹೀಗಾಗಿ ಫೆ. 28ರ ವಿಶ್ವ ವಿಜ್ಞಾನ ದಿನಾಚರಣೆ ಯನ್ನು ಭಾರತದಲ್ಲಿ ರಾಷ್ಟ್ರೀಯ ಹಬ್ಬದ ರೀತಿಯಲ್ಲಿ ಆಚರಿಸಿ, ವಿಜ್ಞಾನಕ್ಕೆ ಹೆಚ್ಚಿನ ಒತ್ತು ನಿಡಬೇಕು’ ಎಂದು ಅವರು ಆಗ್ರಹಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಮಪ್ರಸಾತ್ ಮನೋಹರ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆಯ್ದ ಶಾಲೆಗಳಿಗೆ 2013ನೇ ಸಾಲಿನ ಜಿಲ್ಲಾ ಪರಿಸರ ಮಿತ್ರ ಶಾಲೆ ಪ್ರಶಸ್ತಿ, ಜಿಲ್ಲಾ ಹಸಿರು ಶಾಲೆ ಪ್ರಶಸ್ತಿ, ಕಿತ್ತಳೆ ಶಾಲೆ ಪ್ರಶಸ್ತಿ, ಹಳದಿ ಶಾಲೆ ಪ್ರಶಸ್ತಿಗಳನ್ನು ನೀಡಲಾಯಿತು ಹಾಗೂ ರಾಜ್ಯ ಮಟ್ಟದಲ್ಲಿ ಭಾಗವಹಿಸಿ ವಿಜೇತರಾದ ಜಿಲ್ಲೆಯ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪರಿಸರ ಅಧಿಕಾರಿ ಗುರುದೇವ ಪ್ರಕಾಶ ಜಿ.ಎಂ., ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರೇವಣ ಸಿದ್ದಪ್ಪ, ಜಿಲ್ಲಾ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ವಿ.ಎನ್. ನಾಯಕ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.