ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ವಾಲ್ಮೀಕಿ ಸಮಾಜ ಆಗ್ರಹ

Last Updated 15 ಅಕ್ಟೋಬರ್ 2018, 11:52 IST
ಅಕ್ಷರ ಗಾತ್ರ

ಶಿವಮೊಗ್ಗ: ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದಸದಸ್ಯರುಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಾಲ್ಮೀಕಿ ಜನಾಂಗ ಎಲ್ಲ ಕ್ಷೇತ್ರದಲ್ಲಿಯೂ ಹಿಂದೆ ಉಳಿದಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೂ ಹಲವು ವರ್ಷಗಳ ಬೇಡಿಕೆ ಈಡೇರಿಲ್ಲ.ಈಗಲಾದರೂ ಬೇಡಿಕೆ ಈಡೇರಿಸಲು ಆಗ್ರಹಿಸಿದರು.

ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರಗಳ ವಿತರಣೆ ತಡೆಯಬೇಕು. ರಾಜಕೀಯದಲ್ಲಿ ಮೀಸಲಾತಿ ಇರುವಂತೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಕ್ಕೂ ವಿಸ್ತರಿಸಬೇಕು. ಶೇ 3 ರಿಂದ 7ಕ್ಕೆ ಹೆಚ್ಚಿಸಬೇಕು. ನೌಕರರ ಮುಂಬಡ್ತಿ ಮೀಸಲಾತಿ ಶೀಘ್ರ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ಸಮಾಜವೂ ಸೇರಿದಂತೆ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಸಮಾಜದ ಮೂವರು ಶಾಸಕರಿಗೆ ಸಚಿವ ಸಂಪುಟದಲ್ಲಿಸ್ಥಾನನೀಡಬೇಕು. ನಿಗಮ ಮಂಡಳಿಗಳಲ್ಲಿ ವಾಲ್ಮೀಕಿ ಜನಾಂಗಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಲಕ್ಷ್ಮಣ್, ತಾಲ್ಲೂಕು ಅಧ್ಯಕ್ಷ ಎಚ್.ಆರ್. ಹನುಮಂತಪ್ಪ, ಕೆ. ಮೋಹನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT