ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ವೀರಭದ್ರಪ್ಪ ಕುವೆಂಪು ವಿವಿ ನೂತನ ಕುಲಪತಿ

Last Updated 31 ಜುಲೈ 2019, 14:15 IST
ಅಕ್ಷರ ಗಾತ್ರ

ಶಿವಮೊಗ್ಗ: ದಾವಣಗೆರೆ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಪಿ.ವೀರಭದ್ರಪ್ಪ ಅವರು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕವಾಗಿದ್ದಾರೆ.

61 ವರ್ಷದ (ಜನನ 1958) ವೀರಭದ್ರಪ್ಪ ಅವರ ಸ್ವಗ್ರಾಮ ಹೊನ್ನಾಳಿ ತಾಲ್ಲೂಕು ನ್ಯಾಮತಿ. ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ. ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಆರಂಭಿಸಿದ್ದ ಅವರು ನಂತರ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರಾಗಿ, ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ.

ಅವರ ಮಾರ್ಗದರ್ಶನದಲ್ಲಿ 20 ವಿದ್ಯಾರ್ಥಿಗಳು ಪಿಎಚ್‌.ಡಿ. 25 ವಿದ್ಯಾರ್ಥಿಗಳು ಎಂ.ಫಿಲ್‌ ಪದವಿಗೆ ಅರ್ಹರಾಗಿದ್ದಾರೆ. ಅವರ 100ಕ್ಕೂ ಹೆಚ್ಚು ಸಂಶೋಧನಾ ಬರಹಗಳು ಪ್ರಕಟಗೊಂಡಿವೆ. ಸಮಾಜಶಾಸ್ತ್ರ ವಿಭಾಗಗಳ ಡೀನ್, ದಾವಣಗೆರೆ ವಿವಿ ಪ್ರಭಾರ ಕಲಪತಿಗಳಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ.

ಹಿಂದಿನ ಕುಲಪತಿ ಪ್ರೊ.ಜೋಗನ್ ಶಂಕರ್ ಅವರ ಅವಧಿ ಮುಗಿದ ಕಾರಣಸ್ಥಾನ ತೆರವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT