ವೀರಾಂಜನೇಯ ಸ್ವಾಮಿ ರಥೋತ್ಸವ

7

ವೀರಾಂಜನೇಯ ಸ್ವಾಮಿ ರಥೋತ್ಸವ

Published:
Updated:
Prajavani

ಆನಂದಪುರ: ಇಲ್ಲಿನ ವೀರಾಂಜನೇಯ ಸ್ವಾಮಿ ದೇವಸ್ಥಾನದ ಮಹಾ ರಥೋತ್ಸವ ಬುಧವಾರ ನೆರೆದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಆನಂದಪುರ ಸುತ್ತಮುತ್ತಲಿನ ಹಲವಾರು ಹಳ್ಳಿಗಳಿಂದ ಬಂದ ಸಾವಿರಾರು ಭಕ್ತರು ದೇವರಿಗೆ ಹಣ್ಣು, ಕಾಯಿ, ಕಾಣಿಕೆ ದೇವರಿಗೆ ಸಮರ್ಪಿಸಿ ಪೂಜೆ ಸಲ್ಲಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಥ ಸಂಚರಿಸಿತು.

ನಂತರ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಗಂದೂರು ಧರ್ಮದರ್ಶಿ ರಾಮಪ್ಪ, ‘ದೇವರ ಆರಾಧನೆಯಿಂದ ಮಾತ್ರ ಜೀವನದಲ್ಲಿ ಶಾಂತಿ ನೆಮ್ಮದಿ ದೊರಕಲು ಸಾಧ್ಯ. ದೇಹಕ್ಕೆ ದಣಿವಾದರೆ ಹಸುವನ್ನು ನೀಗಿಸಿಕೊಳ್ಳಬಹುದು, ಆದರೆ ಮನಸ್ಸಿನ ಹಸುವು ನೀಗುವುದು ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯಿಂದ ಮಾತ್ರ ಸಾಧ್ಯ’ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯಿತ್ರಿ ಸುಧಾಕರ್, ವೀರಾಂಜನೇಯ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಹಾಲಪ್ಪ ಹಾಗೂ ಪ್ರಮುಖರಾದ ಮಮತಾ, ಪ್ರಕಾಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !