ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 11 ರೈಲ್ವೆ ನೌಕರರಿಗೆ ಕೋವಿಡ್

Last Updated 10 ಮಾರ್ಚ್ 2021, 14:42 IST
ಅಕ್ಷರ ಗಾತ್ರ

ವಿಜಯನಗರ (ಹೊಸಪೇಟೆ): ಇಲ್ಲಿನ ರೈಲು ನಿಲ್ದಾಣದ 11 ಜನ ನೌಕರರಲ್ಲಿ ಕೋವಿಡ್‌–19 ಇರುವುದು ಬುಧವಾರ ದೃಢಪಟ್ಟಿದೆ. ಇದರೊಂದಿಗೆ ಕೋವಿಡ್‌ಗೆ ಒಳಗಾದವರ ಸಂಖ್ಯೆ 29ಕ್ಕೆ ಏರಿಕೆ ಆಗಿದೆ.

ಮಂಗಳವಾರ ರೈಲ್ವೆ ಇಲಾಖೆಯ 18 ಜನ ನೌಕರರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇವರ ಸಂಪರ್ಕಕ್ಕೆ ಬಂದಿದ್ದ 90 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಬಿಹಾರ, ಉತ್ತರ ಪ್ರದೇಶದ ನೌಕರರನ್ನು ಮಾ. 2ರಂದು ನಗರದ ರೈಲು ನಿಲ್ದಾಣದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು. ಆರಂಭದಲ್ಲಿ ಒಬ್ಬ ನೌಕರನಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ 20 ಜನರನ್ನು ಪರೀಕ್ಷೆಗೆ ಒಳಪಡಿಸಿದಾಗ ಮಹಿಳೆ ಸೇರಿದಂತೆ ಇತರೆ 18 ಜನರಲ್ಲಿ ಸೋಂಕು ಪತ್ತೆಯಾಗಿತ್ತು.

ಹೆಚ್ಚಿನ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದರಿಂದ ನಗರದ ರೈಲು ನಿಲ್ದಾಣವನ್ನು ಹಾಟ್‌ಸ್ಪಾಟ್‌ ಆಗಿ ಘೋಷಿಸಲಾಗಿದೆ. ನಿತ್ಯ ಇಡೀ ನಿಲ್ದಾಣದ ಪರಿಸರದಲ್ಲಿ ಸೋಂಕು ನಿರೋಧಕ ಸಿಂಪಡಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT