ಬುಧವಾರ, ಜೂನ್ 23, 2021
24 °C

ನಿಯಮ ಮೀರಿ ಸಂಚಾರ: 125 ವಾಹನ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ(ವಿಜಯನಗರ): ಸಂಪೂರ್ಣ ಲಾಕ್‌ಡೌನ್‌ ಜಾರಿಗೆ ಬಂದ ಮೊದಲ ದಿನ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ 125 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ನಾಲ್ಕು ಪ್ರಕರಣಗಳನ್ನು ಪೊಲೀಸರು ಬುಧವಾರ ದಾಖಲಿಸಿದ್ದಾರೆ.

ಪಟ್ಟಣ ಪೊಲೀಸ್‌ ಠಾಣೆ, ಟಿ.ಬಿ. ಡ್ಯಾಂ, ಚಿತ್ತವಾಡ್ಗಿ, ಗ್ರಾಮೀಣ ಠಾಣೆ ಹಾಗೂ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 80 ವಾಹನ ವಶಪಡಿಸಿಕೊಂಡು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಮಲಾಪುರ ಠಾಣೆ ವ್ಯಾಪ್ತಿಯಲ್ಲಿ 35 ಹಾಗೂ ಹಂಪಿ ವ್ಯಾಪ್ತಿಯಲ್ಲಿ 10 ಬೈಕ್‌ ವಶಪಡಿಸಿಕೊಳ್ಳಲಾಗಿದೆ.

‘ಯಾವುದೇ ಸೂಕ್ತ ಕಾರಣವಿಲ್ಲದೆ ಅನಗತ್ಯವಾಗಿ ಸವಾರರು ಹೊರಗೆ ಸಂಚರಿಸುತ್ತಿದ್ದರು. ಸಾಂಕ್ರಾಮಿಕ ತಡೆ ಕಾಯ್ದೆ ಅನ್ವಯ ಅವರ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು