ಮಂಗಳವಾರ, ಜೂನ್ 28, 2022
25 °C

ವಿಜಯನಗರ: 19.20 ಕ್ವಿಂಟಲ್‌ ಪಡಿತರ, ವ್ಯಕ್ತಿ ಅಕ್ಕಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ 19.20 ಕ್ವಿಂಟಲ್‌ ಅಕ್ಕಿಯನ್ನು ಗ್ರಾಮೀಣ ಠಾಣೆ ಪೊಲೀಸರು ಶುಕ್ರವಾರ ಇಲ್ಲಿನ ಅರವಿಂದ ನಗರದ ಮಳಿಗೆಯಿಂದ ವಶಪಡಿಸಿಕೊಂಡಿದ್ದಾರೆ.

ಕಡಿಮೆ ಬೆಲೆಗೆ ಖರೀದಿಸಿದ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ ಮಾಡಿ ಹೆಚ್ಚಿನ ಲಾಭ ಗಳಿಸಲು ದಾಸ್ತಾನು ಮಾಡಿದ್ದ ಅಫ್ರೊಜ್‌ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಅಗತ್ಯ ವಸ್ತುಗಳ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಆಹಾರ ಇಲಾಖೆಯ ಇನ್‌ಸ್ಪೆಕ್ಟರ್‌ ಆರ್‌. ಅಜಿತ್ ಕುಮಾರ್, ಶಿರಸ್ತೇದಾರ ಎಚ್‌. ನಾಗರಾಜ್, ಎಎಸ್‌ಐ ಸುರೇಶ್, ಹೆಡ್‌ ಕಾನ್‌ಸ್ಟೆಬಲ್‌ಗಳಾದ ಸುಭಾಷ್‌, ಎಚ್‌.ವಿ. ಗಾಣದಾಳ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು