ಹೊಸಪೇಟೆ (ವಿಜಯನಗರ): ‘ಜಲಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಜಿಲ್ಲೆಯಲ್ಲಿ 30,000 ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್ ತಿಳಿಸಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ಮಂಗಳವಾರ ನಗರದಲ್ಲಿ ಏರ್ಪಡಿಸಿದ್ದ ಗರೀಬ್ ಕಲ್ಯಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ಹಂತದ ಕೆಲಸ ಪ್ರಗತಿಯಲ್ಲಿದೆ. ಇನ್ನುಳಿದ ಎರಡು ಹಂತಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರದ ಸ್ವನಿಧಿ ಯೋಜನೆ, ಆಯುಷ್ಮಾನ್ ಭಾರತ್, ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಪಿ.ಎಂ. ಕಿಸಾನ್ ಸಮ್ಮಾನ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಮಾತೃವಂದನಾ ಯೋಜನೆಗಳು ಜಿಲ್ಲೆಯಲ್ಲಿ ಪ್ರಗತಿಯಲ್ಲಿವೆ ಎಂದು ವಿವರಿಸಿದರು.

ನಗರಸಭೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್.ಎಸ್. ಆನಂದ, ಹುಡಾ ಅಧ್ಯಕ್ಷ ಆಶೋಕ್ ಜೀರೆ, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.