ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: 42 ಡಿಗ್ರಿ ಸೆಲ್ಸಿಯಸ್‌ ದಾಖಲು

Last Updated 19 ಏಪ್ರಿಲ್ 2023, 22:45 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ)/ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬಿಸಿಲು ಹೆಚ್ಚಾಗಿದ್ದು, ಬುಧವಾರ 42 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ತಾಪಮಾನ ಹೆಚ್ಚಾಗಿರುವುದರಿಂದ ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ಬಿಸಿಲ ಝಳ ಇರುತ್ತಿದ್ದು, ಜನ ಹೊರಗೆ ಸುಳಿಯುತ್ತಿಲ್ಲ. ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ. ರಾಜಕೀಯ ಪಕ್ಷಗಳ ಮುಖಂಡರು ಕೂಡ ಬೆಳಿಗ್ಗೆ ಹಾಗೂ ಸಂಜೆ ವೇಳೆ ಪ್ರಚಾರಕ್ಕೆ ಒತ್ತು ಕೊಡುತ್ತಿದ್ದಾರೆ. ಕೆಲ ದಿನಗಳಿಂದ 40ರಿಂದ 41 ಡಿಗ್ರಿ ಸೆಲ್ಸಿಯಸ್‌ ನಡುವೆ ಬಿಸಿಲು ಇರುತ್ತಿದೆ.

ವಿಜಯಪುರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಳ ಜತೆಗೆ ಬಿಸಿ ಗಾಳಿಯೂ ಬೀಸುತ್ತಿದೆ. ವಿಜಯಪುರ ನಗರದಲ್ಲಿ ಗುರುವಾರ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್‌ ಇತ್ತು. ಮುಂದಿನ ಏ. 27ರ ವರೆಗೆ ಇದೇ ಪರಿಸ್ಥಿತಿ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಸಿಲಿನ ಬೇಗೆಗೆ ಜನ, ಜಾನುವಾರು, ಪ್ರಾಣಿ, ಪಕ್ಷಿಗಳು ತತ್ತರಿಸಿವೆ. ಬೆಳಿಗ್ಗೆ 8ಕ್ಕೆ ಮೈಸುಡುವ ಬಿಸಿಲು ಮಧ್ಯಾಹ್ನಕ್ಕೆ ಗರಿಷ್ಠ ಮಟ್ಟ ತಲುಪುವುದರಿಂದ ಜನಸಂಚಾರ ವಿರಳವಾಗಿದೆ. ವಿಜಯಪುರ ನಗರದ ಪ್ರಮುಖ ವೃತ್ತಗಳಲ್ಲಿ(ಟ್ರಾಫಿಕ್‌) ಮಹಾನಗರ ಪಾಲಿಕೆಯು ಹಸಿರು ಹೊದಿಕೆಯ ಚಪ್ಪರ ಮಾಡಿ, ವಾಹನ, ಸಂಚಾರಿಗಳಿಗೆ ಅನುಕೂಲ ಮಾಡಿಕೊಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT