ಮಂಗಳವಾರ, ಸೆಪ್ಟೆಂಬರ್ 28, 2021
21 °C

ಹೊಸಪೇಟೆ (ವಿಜಯನಗರ): ಮುಗುಚಿ ಬಿದ್ದ ಆಟೊ, ಐವರಿಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ವಡ್ಡರಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಂಗಳವಾರ ಆಟೊ ಮುಗುಚಿ ಬಿದ್ದದ್ದರಿಂದ ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

‘ತಾಲ್ಲೂಕಿನ ಮಲಪನಗುಡಿಯಿಂದ ಸಂಡೂರು ಜಿಲ್ಲೆಯ ತೋರಣಗಲ್ಲಿಗೆ ಒಂದೇ ಕುಟುಂಬದ ಐದು ಜನ ಆಟೊದಲ್ಲಿ ಹೋಗುತ್ತಿದ್ದರು. ವಡ್ಡರಹಳ್ಳಿಯ ನಾಗಪ್ಪ ಕ್ಯಾಂಪ್‌ ಬಳಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಆಟೊ ರಸ್ತೆ ಬದಿ ಮುಗುಚಿ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಗಾಯಗೊಂಡವರನ್ನು ಆಟೊದಿಂದ ಹೊರತಂದಿದ್ದಾರೆ. ಬಳಿಕ ಗಾಯಗೊಂಡವರನ್ನು ಆಂಬುಲೆನ್ಸ್‌ ಮೂಲಕ ಬಳ್ಳಾರಿಯ ವಿಮ್ಸ್‌ಗೆ ಕಳುಹಿಸಿಕೊಡಲು ನೆರವಾಗಿದ್ದಾರೆ. ಯಾರಿಗೂ ಪ್ರಾಣಾಪಾಯವಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು