ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಹಳ್ಳಿ ಚೆಕ್ ಪೋಸ್ಟ್‌ನಲ್ಲಿ ₹5 ಲಕ್ಷ ವಶ

Published 24 ಏಪ್ರಿಲ್ 2023, 9:27 IST
Last Updated 24 ಏಪ್ರಿಲ್ 2023, 9:27 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಲ್ಲಹಳ್ಳಿ ಚೆಕ್ ಪೋಸ್ಟ್ ನಲ್ಲಿ ಬೊಲೆರೊ ವಾಹನದಿಂದ ₹5 ಲಕ್ಷ ನಗದು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.

ಹೊಸಪೇಟೆ-ಸಂಡೂರು ರಸ್ತೆಯಲ್ಲಿರುವ ಚೆಕ್ ಪೋಸ್ಟ್ ಮೂಲಕ ಸಂಚರಿಸುತ್ತಿದ್ದ ಬೊಲೊರೊ ವಾಹನ ತಡೆದು ಪರಿಶೀಲಿಸಿದಾಗ ₹5 ಲಕ್ಷ ನಗದು ಪತ್ತೆಯಾಗಿದೆ. ಅದಕ್ಕೆ‌ ಸಂಬಂಧಿಸಿದ ಯಾವ ದಾಖಲೆಗಳು ಇರದ ಕಾರಣ ವಶಕ್ಕೆ ಪಡೆಯಲಾಗಿದೆ. ಯಾವ ಉದ್ದೇಶಕ್ಕೆ ಹಣ ಕೊಂಡೊಯ್ಯಲಾಗುತ್ತಿತ್ತು ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT