ಹೊಸಪೇಟೆ (ವಿಜಯನಗರ): ನಗರದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯ ಯುಜಿಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದು ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರದ ಎಲ್ಲ ವಾರ್ಡಗಳಿಗೆ ನಿಗದಿತ ವೇಳೆಗೆ ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.

‘ಕುಡಿಯುವ ನೀರಿನ ಪೈಪ್ಲೈನ್ಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು. ಅಭಿವೃದ್ಧಿಗೆ ಆದ್ಯತೆ ನೀಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ಮಾತನಾಡಿ, ಅಡಳಿತ ಸುಧಾರಣೆಗೆ ನಗರಸಭೆ ಅಧಿಕಾರಿಗಳಿಗೆ, ನೌಕರರಿಗೆ ಆಡಳಿತ ನಿರ್ವಹಣಾ ತರಬೇತಿಗಳನ್ನು ಕ್ರಮಬದ್ದವಾಗಿ ಆಯೋಜನೆ ಮಾಡಬೇಕು. ವೈಚಾರಿಕ ಮತ್ತು ವೈಜ್ಞಾನಿಕ ಆಡಳಿತಕ್ಕೆ ಪೂರಕವಾಗಿ ಆಡಳಿತ ಸಿಬ್ಬಂದಿಯನ್ನು ನೇಮಿಸಲು ವೃಂದ ನೇಮಕಾತಿಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದರು.

300 ಹುದ್ದೆ ಖಾಲಿ: ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿ, ಒಟ್ಟು 540 ಹುದ್ದೆಗಳ ಪೈಕಿ ಪ್ರಸ್ತುತ 300 ಹುದ್ದೆಗಳು ಖಾಲಿ ಇವೆ. 156 ಖಾಯಂ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆಯಲ್ಲಿ 55 ಪೌರಕಾರ್ಮಿಕರು ಸೇರಿದಂತೆ ಒಟ್ಟು 211 ಪೌರಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಆಯೋಗ ಸದಸ್ಯರಾದ ಮಹಮ್ಮದ್ ಸನಾವುಲ್ಲ, ಆರ್.ಎಸ್.ಫೋಂಡೆ, ಸಮಾಲೋಚಕರಾದ ಸುಪ್ರಸನ್ನ, ಕೆಂಪೇಗೌಡ, ಅಪ್ತಕಾರ್ಯದರ್ಶಿ ಏಲಕ್ಕಿ ಗೌಡ, ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಶಂಕ್ರಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.