ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮರಿಯಮ್ಮನಹಳ್ಳಿ | ಅಂಗನವಾಡಿಗಳಿಗೆ ರಾಜಸ್ಥಾನದ ಅಧಿಕಾರಿಗಳ ತಂಡ ಭೇಟಿ

Published 26 ಜೂನ್ 2024, 16:18 IST
Last Updated 26 ಜೂನ್ 2024, 16:18 IST
ಅಕ್ಷರ ಗಾತ್ರ

ಮರಿಯಮ್ಮನಹಳ್ಳಿ: ಪಟ್ಟಣದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಬುಧವಾರ ರಾಜಸ್ಥಾನದ ಸಿಎಂಎಫ್ ಟಾಟಾ ಟ್ರಸ್ಟ್ ಸಂಸ್ಥೆಯ ಐವರು ಅಧಿಕಾರಿಗಳ ತಂಡ ಭೇಟಿ ನೀಡಿ ಅಧ್ಯಯನ ನಡೆಸಿದರು.

ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಲ್ಲಿ ನಡೆಯುತ್ತಿರುವ ಶಾಲಾ ಪೂರ್ವ ಶಿಕ್ಷಣ ಚಟುವಟಿಕೆಗಳ ಕುರಿತು ಅಧಿಕಾರಿಗಳ ತಂಡ ಅಧ್ಯಯನ ನಡೆಸಿತು.

ಮಕ್ಕಳಿಗೆ ನೀಡುತ್ತಿರುವ ಚಟುವಟಿಕೆಗಳನ್ನು ಅವಲೋಕಿಸಿ, ಶಿಕ್ಷಕಿಯರಿಂದ ಮಾಹಿತಿ ಪಡೆದುಕೊಂಡರು.

ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಂಗನವಾಡಿ ಕೇಂದ್ರಗಳಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಕೈಗೊಂಡ ಬೆಳವಣಿಗೆ ಕುರಿತು ಮಾಹಿತಿ ಪಡೆದುಕೊಂಡರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಎಲೆಗಾರ್, ಮೇಲ್ವಿಚಾರಕಿಯರಾದ ಯಶೋಧ, ನಸೀಮಾ, ಟಾಟಾ ಟ್ರಸ್ಟ್‍ನ ದತ್ತಾತ್ರೇಯ, ಜಗನ್ನಾಥ, ಗಿರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT