ಹೂವಿನಹಡಗಲಿ: ತಾಲ್ಲೂಕಿನ ಅಡವಿಮಲ್ಲನಕೆರೆ ತಾಂಡಾದ ಗರ್ಭಿಣಿಯೊಬ್ಬರು ಶನಿವಾರ ಬೆಳಿಗ್ಗೆ ಆಂಬುಲೆನ್ಸ್‌ನಲ್ಲೇ ಅವಳಿ ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ.
ಅಡವಿಮಲ್ಲನಕೆರೆ ತಾಂಡಾದ ಮಹಿಳೆ ಶೋಭಾ ಶ್ರೀಕಾಂತನಾಯ್ಕ ಅವರಿಗೆ ಶನಿವಾರ ನಸುಕಿನಲ್ಲಿ ಹೆರಿಗೆ ನೋವು ಆರಂಭವಾದಾಗ 108 ಆರೋಗ್ಯ ಕವಚ ಅಂಬುಲೆನ್ಸ್ ನಲ್ಲಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾರ್ಗ ಮಧ್ಯೆ ಹೆರಿಗೆ ನೋವು ತೀವ್ರಗೊಂಡಿದ್ದರಿಂದ ಆಂಬುಲೆನ್ಸ್‌ನಲ್ಲಿದ್ದ ತುರ್ತು ವೈದ್ಯಕೀಯ ಸಿಬ್ಬಂದಿ ನಾಮದೇವ, ಚಾಲಕ ಲಿಂಗರಾಜ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಚಿಗಟೇರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಸುರಕ್ಷಿತ ಹೆರಿಗೆ ಮಾಡಿಸಿದ ಆಂಬುಲೆನ್ಸ್ ಸಿಬ್ಬಂದಿ ಕಾರ್ಯವನ್ನು 108 ಆರೋಗ್ಯ ಕವಚ ನೌಕರರ ಸಂಘದ ಅಧ್ಯಕ್ಷ ಅನಿಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ಧನುನಾಯಕ ಹಾಗೂ ಬಾಣಂತಿಯ ಕುಟುಂಬದ ಸದಸ್ಯರು ಶ್ಲಾಘಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.