ಶನಿವಾರ, ಜುಲೈ 2, 2022
20 °C
ಹೊಸಪೇಟೆಯಲ್ಲಿ 'ಏಕ್ ಲವ್ ಯಾ' ಚಿತ್ರತಂಡ 

ಹೊಸಪೇಟೆ ಲಕ್ಷ್ಮಿ ಚಿತ್ರಮಂದಿರಕ್ಕೆ ನಟ ಪ್ರೇಮ್‌, ನಟಿ ರಕ್ಷಿತಾ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ರಾಜ್ಯದಾದ್ಯಂತ ಪ್ರದರ್ಶನ ಕಾಣುತ್ತಿರುವ ಕನ್ನಡದ 'ಏಕ್ ಲವ್ ಯಾ' ಚಿತ್ರತಂಡ ಶನಿವಾರ ನಗರಕ್ಕೆ ಭೇಟಿ ನೀಡಿತು.

ನಗರದ ಲಕ್ಷ್ಮಿ ಚಿತ್ರಮಂದಿರಕ್ಕೆ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್, ನಟಿ– ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣಾ, ನಾಯಕಿ ರೀಷ್ಮಾ ನಾಣಯ್ಯ ಭೇಟಿ ನೀಡಿದರು. ಚಿತ್ರತಂಡ ಭೇಟಿ ನೀಡುವ ವಿಷಯ ತಿಳಿದು ಅಭಿಮಾನಿಗಳು ಚಿತ್ರಮಂದಿರದ ಬಳಿ ಜಮಾಯಿಸಿದ್ದರು. ನಟರು ಬರುತ್ತಿದ್ದಂತೆ ಶಿಳ್ಳೆ, ಚಪ್ಪಾಳೆ ಹೊಡೆದು ಸ್ವಾಗತಿಸಿದರು. ಅವರೊಂದಿಗೆ ಕೈಕುಲುಕಿ ಸಂಭ್ರಮಿಸಿದರು. ಸೆಲ್ಫಿ ತೆಗೆದುಕೊಂಡರು.

ನಿರ್ಮಾಪಕಿ ರಕ್ಷಿತಾ ಪ್ರೇಮ್ ಅವರು ಚಿತ್ರಮಂದಿರದಲ್ಲಿ ದಿ.ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕೇಕ್ ಕತ್ತರಿಸಿದರು. ಬಳಿಕ ಮಾತನಾಡಿ, ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದೇವೆ. ಈ ಭಾಗದ ಜನ ಕನ್ನಡ ಸಿನಿಮಾಗಳನ್ನು ನೋಡಿ ಪ್ರೋತ್ಸಾಹಿಸುತ್ತಿರುವುದು ಖುಷಿಯ ವಿಚಾರ ಎಂದರು.

ನಿರ್ದೇಶಕ ಜೋಗಿ ಪ್ರೇಮ್ ಮಾತನಾಡಿ, ಕನ್ನಡಿಗರು ಸಿನಿಮಾವನ್ನು, ಹೊಸ ಕಲಾವಿದರನ್ನು ಕೈಹಿಡಿದಿದ್ದಾರೆ ಅಭಿಮಾನಿಗಳು ಅದ್ಭುತ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು