ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ಮೀಸಲು ಹೆಚ್ಚಳ: ಅ. 8ರಂದು ಸರ್ವಪಕ್ಷ ಸಭೆ– ಶ್ರೀರಾಮುಲು

Last Updated 26 ಸೆಪ್ಟೆಂಬರ್ 2022, 11:45 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂಬ ಬೇಡಿಕೆ ಬಗ್ಗೆ ಚರ್ಚಿಸಲು ಸರ್ಕಾರ ಅ. 8ರಂದು ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ಕರೆದಿದೆ. ಎಲ್ಲ ಪಕ್ಷಗಳ ಮುಖಂಡರ ಸಲಹೆ, ಅಭಿಪ್ರಾಯ ಪಡೆದು, ಆದಷ್ಟು ಶೀಘ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಮವಾರ ನಡೆದ ಮಿನಿ ವಿಧಾನಸೌಧ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಹಾಗೂ ಸರ್ಕಾರ ಕೊಟ್ಟ ಮಾತಿನಂತೆ ಮೀಸಲು ಕಲ್ಪಿಸಲು ಬದ್ಧವಾಗಿದೆ. ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದರು.

ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಯಾರೂ ಪಾಲ್ಗೊಳ್ಳಬಾರದು ಎಂದು ಕಾಂಗ್ರೆಸ್‌ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಇದರಿಂದ ಸಮಾಜಕ್ಕೆ ನಷ್ಟ ಉಂಟಾಗುತ್ತದೆ. ಅವರು ಕಾನೂನಿನ ಅರಿವು ಇದ್ದ ರಾಜಕಾರಣಿ. ಆ ರೀತಿ ಮಾತನಾಡಬಾರದು. ವಾಲ್ಮೀಕಿ ಜಯಂತಿ ಹೆಸರಿನಲ್ಲಿ ಸ್ವಾಮೀಜಿ, ಸತೀಶ ಸೇರಿದಂತೆ ಬೇರೆ ಮುಖಂಡರು ರಾಜಕಾರಣ ಮಾಡಬಾರದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT