’ಸಿಂದಗಿಗೆ ರಾಜ್ಯ ಸರ್ಕಾರ ಅನುದಾನ ನೀಡಬೇಕು’
ವಿಜಯಪುರ ಜಿಲ್ಲೆ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರದಿಂದ ತಂದಿರುವೆ ಎಂದು ಸಂಸದ ರಮೇಶ ಜಿಗಜಿಣಗಿ ಅವರ ಹೇಳಿಕೆಗೆ ಶಾಸಕ ಅಶೋಕ ಮನಗೂಳಿ ಸಿಂದಗಿ ಮತಕ್ಷೇತ್ರಕ್ಕೆ ಎಷ್ಟು ಅನುದಾನ ಬಿಡುಗಡೆಗೊಳಿಸಿದ್ದೀರಿ ಎಂದು ಪ್ರಶ್ನಿಸಿದ್ದರು. ಸಿಂದಗಿ ಕ್ಷೇತ್ರದ ಅಭಿವೃದ್ಧಿಗೆ ನೀವು ರಾಜ್ಯ ಸರ್ಕಾರದಿಂದ ಅನುದಾನ ತರಬೇಕು ಎಂದು ಜಿಗಜಿಣಗಿ ಟಾಂಗ್ ಕೊಟ್ಟರು.