ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದ್ ಸಿಂಗ್‌ಗೆ ಸಚಿವ ಸ್ಥಾನ: ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Last Updated 4 ಆಗಸ್ಟ್ 2021, 14:12 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಆನಂದ್ ‌ಸಿಂಗ್‌ಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ನಗರದಲ್ಲಿ ಬುಧವಾರ ಸಂಜೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ನಗರದ ಸ್ಟೇಷನ್ ರಸ್ತೆಯ ಬಳಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿದರು.

ಈ ವೇಳೆ ಮಾತನಾಡಿದ ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾ ಜಿಲ್ಲಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿದ್ದು ಕಾರ್ಯಕರ್ತರಿಗೆ, ಕ್ಷೇತ್ರದ ಜನತೆಗೆ ಖುಷಿಯಾಗಿದೆ. ಅವರಿಗೆ ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ ನೂತನ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ವಿಶ್ವಾಸವಿದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಮುಖಂಡರಾದ ಶಂಕರ್ ಮೇಟಿ, ಶಶಿಧರ ಸ್ವಾಮಿ, ಜೀವರತ್ನಂ ಸೇರಿದಂತೆ ಕಾರ್ಯಕರ್ತರು ಇದ್ದರು.

ಬಿಜೆಪಿ ಕಾರ್ಯಕರ್ತರು ಸಿಹಿ ತಿಂದು ಸಂಭ್ರಮಿಸಿದರು
ಬಿಜೆಪಿ ಕಾರ್ಯಕರ್ತರು ಸಿಹಿ ತಿಂದು ಸಂಭ್ರಮಿಸಿದರು
ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಪಟಾಕಿ ಸಿಡಿಸಿ ಸಂಭ್ರಮಾಚರಣೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT