ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರಕ್ಕೆ ಅಕ್ಟೋಬರ್‌ ಅಂತ್ಯದೊಳಗೆ ಅಧಿಕಾರಿಗಳ ನೇಮಕ: ಆನಂದ್‌ ಸಿಂಗ್‌ 

Last Updated 8 ಸೆಪ್ಟೆಂಬರ್ 2021, 8:43 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ನೂತನ ವಿಜಯನಗರ ಜಿಲ್ಲೆಗೆ ಅಕ್ಟೋಬರ್‌ ಅಂತ್ಯದೊಳಗೆ ಅಧಿಕಾರಿಗಳು ನೇಮಕಗೊಳ್ಳುವರು’ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಆನಂದ್‌ ಸಿಂಗ್‌ ಹೇಳಿದರು.

ಇಲ್ಲಿನ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಬಿಡಿಸಿಸಿ) ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಜಯನಗರ ಜಿಲ್ಲೆಗೆ ಸಂಬಂಧಿಸಿದ ಸಭೆ ಇತ್ತೀಚೆಗೆ ನಡೆದಿದೆ. ಮೊದಲ ಹಂತದಲ್ಲಿ 11 ಇಲಾಖೆಗಳು ಕೆಲಸ ನಿರ್ವಹಿಸಲಿವೆ. ಈ ಇಲಾಖೆಗಳಿಗೆ ಅಕ್ಟೋಬರ್‌ ಕೊನೆಯೊಳಗೆ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು.

‘ತುಂಗಭದ್ರಾ ಜಲಾಶಯದ ನೀರು ಮಲಿನಗೊಳಿಸುತ್ತಿರುವವರ ವಿರುದ್ಧ ಜಾಮೀನು ರಹಿತ ವಾರೆಂಟ್‌ ಹೊರಡಿಸಬೇಕೆಂದು ಈ ಹಿಂದೆ ಹೇಳಿದ್ದೆ. ಇದು ಏಕಾಏಕಿ ಆಗುವ ಕೆಲಸವಲ್ಲ. ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗುತ್ತದೆ. ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ’ ಎಂದರು.

‘ಸಹಕಾರ ಕೇಂದ್ರ ಬ್ಯಾಂಕ್‌ ಶತಮಾನೋತ್ಸವ ಪೂರೈಸಿದೆ. ಈ ಸಂದರ್ಭದಲ್ಲಿ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿ, ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರುವ ಚರ್ಚೆ ಸಭೆಯಲ್ಲಿ ನಡೆದಿದೆ. ಸದಾ ನೆನಪಿನಲ್ಲಿರುವಂತೆ ಶತಮಾನೋತ್ಸವ ಕಾರ್ಯಕ್ರಮ ಏರ್ಪಡಿಸುವ ಯೋಚನೆ ಇದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT