ಮಂಗಳವಾರ, ಅಕ್ಟೋಬರ್ 4, 2022
25 °C

ಹೊಸಪೇಟೆ: ಹೆಚ್ಚುವರಿ ಕೆಲಸ ವಿರೋಧಿಸಿ ‘ಆಶಾ’ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆಗೆ ಸಂಬಂಧವಿಲ್ಲದ ಹೆಚ್ಚುವರಿ ಕೆಲಸ ನೀಡುತ್ತಿರುವುದನ್ನು ವಿರೋಧಿಸಿ ಆಶಾ ಕಾರ್ಯಕರ್ತೆಯರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿ, ‘ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್’ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಆಶಾ ಕಾರ್ಯಕರ್ತೆಯರಿಂದ ಆಯುಷ್ಮಾನ್‌ ಭಾರತ್‌ ಹೆಲ್ತ್‌ ಅಕೌಂಟ್‌, ಮತ ಚೀಟಿಗೆ ಆಧಾರ್ ಜೋಡಣೆ, ಈ– ಸಂಜೀವಿನಿಯಂಥ ಮೊಬೈಲ್ ಆಧಾರಿತ ಇತರೆ ಚಟುವಟಿಕೆಗಳನ್ನು ಒತ್ತಾಯಪೂರ್ವಕವಾಗಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದರು.

ಎ.ಐ.ಯು.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ನಿಗದಿಪಡಿಸಿದ ಕೆಲಸಗಳನ್ನು ಹೊರತುಪಡಿಸಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಳಸಿಕೊಳ್ಳಲಾಗುತ್ತಿದೆ. ತಾಯಿ-ಮಗುವಿನ ಆರೋಗ್ಯ ಕಾಪಾಡುವ ಪ್ರಮುಖ ಕೆಲಸವೇ ಹಿಂದಕ್ಕೆ ಸರಿಯುವ ಪರಿಸ್ಥಿತಿ ಎದುರಾಗಿದೆ ಎಂದರು.

ಆಶಾ ಸಂಘದ ಗೌರವ ಅಧ್ಯಕ್ಷೆ ಎ.ಶಾಂತಾ, ನೇತ್ರಾವತಿ, ಅನ್ನಪೂರ್ಣ, ಮಾರೆಕ್ಕ, ವಿಶಾಲಾಕ್ಷಿ, ಸುನಿತಾ, ಭುವನೇಶ್ವರಿ, ಶಿವಗಂಗಮ್ಮ, ಗೌರಿ, ಶೋಭಾ, ಹುಲಿಗೆಮ್ಮ, ಛಾಯಾ, ಶೋಭಾ, ಶ್ವೇತಾ, ಅನ್ನಪೂರ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು