ಹೊಸಪೇಟೆ (ವಿಜಯನಗರ): ಆಶಾ ಕಾರ್ಯಕರ್ತೆಯರ ಮಾಸಿಕ ಪ್ರೋತ್ಸಾಹಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕೆಂಬ ಪ್ರಮುಖ ಬೇಡಿಕೆ ಸಹಿತ ಇತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಂಗಳವಾರ ಇಲ್ಲಿನ ಜಿಲ್ಲಾ ಕ್ರೀಡಾಂಗಣ ಬಳಿಯ ಕಾಲೇಜು ರಸ್ತೆ ಕಾಲುದಾರಿಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದರು.

ಎಐಯುಟಿಯುಸಿಗೆ ಸಂಯೋಜನೆಗೊಂಡ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕರೆಯ ಮೇರೆಗೆ ರಾಜ್ಯದ ಎಲ್ಲೆಡೆಯಂತೆ ಇಲ್ಲೂ ಈ ಧರಣಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅವಕಾಶ ನೀಡದ ಕಾರಣ ಬೀದಿ ಬದಿಯಲ್ಲೇ ಧರಣಿ ಆರಂಭಿಸಿದರು. ಆ.14ರವರೆಗೂ ಈ ಧರಣಿ ಮುಂದುವರಿಯಲಿದೆ.

ಸಂಘದ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ ಮಾತನಾಡಿ, ಕಳೆದ ಏಳು ತಿಂಗಳಿನಿಂದ ರಾಜ್ಯ ಸರ್ಕಾರ ಬರೀ ಸುಳ್ಳು ಭರವಸೆಗಳನ್ನು ನೀಡುತ್ತಾ ಬಂದಿದೆ. ಇದರ ಜೊತೆಗೆ ಆಶಾಗಳನ್ನ ಕೆಲಸದಿಂದ ತೆಗೆಯುವ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅಹೋರಾತ್ರಿ ಧರಣಿಗೆ ಮುಂದಾಗಬೇಕಾಗಿದೆ. ಇದಕ್ಕೂ ಸ್ಪಂದಿಸದೆ ಹೋದರೆ ಇನ್ನೂ ದೊಡ್ಡ ಮಟ್ಟದ ಚಳುವಳಿಗೆ ಆಶಾಗಳು ತಯಾರಾಗುತ್ತಾರೆ’ ಎಂದರು.

‘ಮುಖ್ಯಮಂತ್ರಿ ಅವರು ಏಳು ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಜಾರಿಗೆ ತರಬೇಕು. ಕಳೆದ ರಾಜ್ಯ ಬಜೆಟ್ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹1,000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು, ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಈ ಧರಣಿ ನಡೆಯತ್ತಿದೆ’ ಎಂದು ಸಂಘದ ಜಿಲ್ಲಾ ಸಮಿತಿಯ ಗೌರವ ಅಧ್ಯಕ್ಷ ಡಾ.ಪ್ರಮೋದ್ ಎನ್. ತಿಳಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷೆ ಗೀತಾ, ಕಾರ್ಯದರ್ಶಿ ಗೌರಮ್ಮ, ಮುಖಂಡರಾದ ಚೆನ್ನಮ್ಮ, ವೀರಮ್ಮ, ವೀಣಾ, ಗೌರಿ, ಸುಮಂಗಳಾ, ನೇತ್ರಾ, ಮಹೇಶ್ವರಿ, ಮಂಜುಳಾ ಇತರರು ಇದ್ದರು.

ಬಸ್ ನಿಲ್ದಾಣದಿಂದ ಜಿಲ್ಲಾ ಕ್ರೀಡಾಂಗಣದ ವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮಳೆಯನ್ನೂ ಲೆಕ್ಕಿಸದೆ ರಸ್ತೆ ಬದಿಯಲ್ಲೇ ಧರಣಿ ಮುಂದುವರಿದಿದ್ದು, ಇನ್ನಷ್ಟು ಮಳೆ ಸುರಿದರೆ ಉತ್ತರಾದಿಮಠದ ಸಭಾಂಗಣಕ್ಕೆ ಧರಣಿನಿರತರು ಹೋಗಲಿದ್ದಾರೆ.

ಮಾಸಿಕ ಕನಿಷ್ಠ 10 ಸಾವಿರ ಗೌರವಧನ ನೀಡಲು ಆಗ್ರಹ

ಬಳ್ಳಾರಿ: ಮಾಸಿಕ ಗೌರವ ಧನ ಹೆಚ್ಚಳ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ಮಂಗಳವಾರ ಆರಂಭವಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿರುವ ನೂರಾರು ಸಂಖ್ಯೆಯ ಆಶಾಗಳು ಬೆಳಗ್ಗೆ ಧರಣಿ ಆರಂಭಿಸಿದರು. ಪ್ರತಿಭಟನಾ ಸ್ಥಳದಲ್ಲೇಯೇ ಆಹಾರ ಸೇವಿಸಿದರು. ಹೋರಾಟವನ್ನು ಮುಂದುವರಿಸಿದರು ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಗೌರವಾಧ್ಯಕ್ಷೆ ಶಾಂತಾ ಮಾತನಾಡಿ ‘ಜನವರಿಯಲ್ಲಿ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಸತತ 4 ದಿನಗಳ ಕಾಲ ಪ್ರತಿಭಟನೆ ನಡೆಸಿದಾಗ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ನಮ್ಮ ಮನವೊಲಿಸಿದ್ದರು. ಕೇಂದ್ರದ ಪ್ರೋತ್ಸಾಹ ಧನ ಮತ್ತು ರಾಜ್ಯದ ಗೌರವಧನ ಸೇರಿಸಿ ಮಾಸಿಕ ₹10 ಸಾವಿರವನ್ನು ಗ್ಯಾರಂಟಿ ಮಾಡುತ್ತೇವೆ’ ಎಂದಿದ್ದರು. ‘ಬಜೆಟ್ನಲ್ಲಿ ಈ ವಿಷಯವನ್ನು ಸೇರಿಸುವುದಾಗಿ ಮಾತುಕೊಟ್ಟಿದ್ದರು. ಆದರೆ 7 ತಿಂಗಳು ಕಳೆದರೂ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಬದಲಿಗೆ ಆಶಾಗಳನ್ನು ಕೆಲಸದಿಂದ ತೆಗೆದು ಹಾಕುವ ಕಾರ್ಯಕ್ಕೆ ಸರ್ಕಾರ ಕೈಹಾಕಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ‘ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಳೆದ 17 ವರ್ಷ ಹಗಲಿರುಳು ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸುತ್ತಿಲ್ಲ. ಕನಿಷ್ಠ 10 ಸಾವಿರ ಗೌರವಧನ ನೀಡದೇ ಇರುವುದು ದುರಂತ’ ಎಂದು ಆರೋಪಿಸಿದರು. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ ಹೋರಾಟಗಾರರಾದ ಈಶ್ವರಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.