ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ಜಿಲ್ಲೆ ಮಾಡಿದರೂ ಬಿಜೆಪಿ ಬೆಂಬಲಿಸದ ಜನ

ವಿಜಯನಗರ ಜಿಲ್ಲೆ ರಚಿಸಿ, ಸಾವಿರಾರು ಕೋಟಿ ರೂಪಾಯಿ ಅನುದಾನ ಕೊಟ್ಟರೂ ಸಹ ಹೊಸ ಜಿಲ್ಲೆಯ ಜನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಲಿಲ್ಲ.
Published 13 ಮೇ 2023, 11:20 IST
Last Updated 13 ಮೇ 2023, 11:20 IST
ಅಕ್ಷರ ಗಾತ್ರ

ಹೊಸಪೇಟೆ: ವಿಜಯನಗರ ಜಿಲ್ಲೆ ರಚಿಸಿ, ಸಾವಿರಾರು ಕೋಟಿ ರೂಪಾಯಿ ಅನುದಾನ ಕೊಟ್ಟರೂ ಸಹ ಹೊಸ ಜಿಲ್ಲೆಯ ಜನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಲಿಲ್ಲ.

ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಒಂದು ಕಡೆ ಗೆಲುವು ದಾಖಲಿಸಿದೆ. ಎರಡರಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಪಕ್ಷೇತರ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಪಟ್ಟು ಹಿಡಿದು ಜಿಲ್ಲೆ ಮಾಡಿಸಿದ್ದ ಮಾಜಿಸಚಿವ ಆನಂದ್‌ ಸಿಂಗ್‌ ಅವರ ಮಗ, ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್‌ ಅವರು ಜಿಲ್ಲಾ ಕೇಂದ್ರವಾದ ವಿಜಯನಗರ (ಹೊಸಪೇಟೆಯಲ್ಲಿ) ಕ್ಷೇತ್ರದಲ್ಲಿ ಭಾರಿ ಅಂತರದಿಂದ ಸೋಲು ಕಂಡಿದ್ದಾರೆ. ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಹೂವಿನಹಡಗಲಿಯಲ್ಲಿ ಮಾತ್ರ ಬಿಜೆಪಿ ಜಯ ಗಳಿಸಿದೆ. ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ್ದ ಕೃಷ್ಣ ನಾಯ್ಕ ಅವರು ಈ ಹಿಂದಿನ ಎರಡು ಚುನಾವಣೆಯಲ್ಲಿ ಜಯ ಕಂಡಿದ್ದ ಪಿ.ಟಿ. ಪರಮೇಶ್ವರ ನಾಯ್ಕ ಅವರನ್ನು ಸೋಲಿಸಿದ್ದಾರೆ.

ಹಗರಿಬೊಮ್ಮನಹಳ್ಳಿಯಲ್ಲಿ ಜೆಡಿಎಸ್‌ನಿಂದ ಕೆ. ನೇಮರಾಜ ನಾಯ್ಕ ಗೆಲುವು ಕಂಡಿದ್ದಾರೆ. ಕೊನೆಯ ಕ್ಷಣದಲ್ಲಿ ಅವರಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿತ್ತು. ಹರಪನಹಳ್ಳಿಯಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ. ಕೂಡ್ಲಿಗಿಯಲ್ಲಿ ಕಾಂಗ್ರೆಸ್‌ನ ಡಾ. ಎನ್‌.ಟಿ. ಶ್ರೀನಿವಾಸ್‌ ಜಯ ಸಾಧಿಸಿದ್ದಾರೆ.

ಪಕ್ಷಗಳ ಬಲಾಬಲ ಹೀಗಿದೆ

05–ಒಟ್ಟು ಕ್ಷೇತ್ರಗಳು

02–ಕಾಂಗ್ರೆಸ್‌

01–ಬಿಜೆಪಿ

01–ಜೆಡಿಎಸ್‌

01–ಪಕ್ಷೇತರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT