ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ವಿಶ್ವವಿದ್ಯಾಲಯದಲ್ಲಿ ಆ. 9, 10ರಂದು ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನ

Published 21 ಜುಲೈ 2023, 13:42 IST
Last Updated 21 ಜುಲೈ 2023, 13:42 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಬೆಂಗಳೂರಿನ ಭರತ ನೃತ್ಯ ಅಕಾಡೆಮಿ ಮತ್ತು ಹಂಪಿಯ ಕನ್ನಡ ವಿಶ್ವವಿದ್ಯಾಲಯಗಳ  ಸಹಯೋಗದಲ್ಲಿ ಆಗಸ್ಟ್‌ 9 ಮತ್ತು 10ರಂದು ಹಂಪಿ ವಿಶ್ವವಿದ್ಯಾಲಯದಲ್ಲಿ ಪ್ರದರ್ಶನ ಕಲೆಗಳ ಕುರಿತ ರಾಷ್ಟ್ರೀಯ ಸಮ್ಮೇಳನ  ಹಾಗೂ ನೃತ್ಯ  ಪ್ರದರ್ಶನ  ಹಮ್ಮಿಕೊಳ್ಳಲಾಗಿದೆ.

‘ಪ್ರದರ್ಶನ ಕಲೆಗಳಲ್ಲಿ ಆಗಿರುವ ಸಂಶೋಧನೆಗಳು ವಿಶ್ವವಿದ್ಯಾಲಯ ಮಟ್ಟದಲ್ಲೇ ಉಳಿದಿವೆ. ಅವುಗಳನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಈ  ಸಮ್ಮೇಳನ ಮತ್ತು ಶಾಸ್ತ್ರೀಯ ನೃತ್ಯ ಪ್ರದರ್ಶನವನ್ನು ಇದೇ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿದೆ’ ಎಂದು ಅಕಾಡೆಮಿಯ ಸಂಚಾಲಕಿ ಹಾಗೂ ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷೆ ಡಾ.ಶುಭಾರಾಣಿ ಬೋಳಾರ್‌ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸಮ್ಮೇಳನದಲ್ಲಿ 50ಕ್ಕೂ ಅಧಿಕ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಗುವುದು. ಸಂಜೆ ಶಾಸ್ತ್ರೀಯ ನೃತ್ಯ ಪ್ರದರ್ಶನ ನಡೆಯಲಿದೆ. ಸುಮಾರು 200 ಮಂದಿ ಸಂಶೋಧಕರು ಮತ್ತು ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ವಿ.ಶಿವರಾಂ ಫೌಂಡೇಶನ್‌, ಭಾರತೀಯ ವಿದ್ಯಾಭವನ ಮತ್ತು ಡಾ.ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಪಾಲುದಾರರಾಗಿರುತ್ತಾರೆ’ ಎಂದು ಅವರು ಹೇಳಿದರು.

ಕಲಾವಿದರಾದ ನಾಗವೇಣಿ ಕುಲಕರ್ಣಿ ಮತ್ತು ಅಂಜಲಿ ಅವರು ಸಮ್ಮೇಳನದ ಸ್ಥಳೀಯ ಸಂಯೋಜಕರಾಗಿರುತ್ತಾರೆ. ಬೆಂಗಳೂರಿನ ರೇವಾ ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ ಸಹಿತ ಹಲವು ವಿಶ್ವವಿದ್ಯಾಲಯಗಳು ಇದರಲ್ಲಿ ಪಾಲ್ಗೊಳ್ಳಲಿವೆ ಎಂದರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರೊಫೆಸರ್‌ ವಿ.ಶಿವರಾಂ ಸಮ್ಮೇಳನದ ಬಗ್ಗೆ ಪೂರಕ ಮಾಹಿತಿ ನೀಡಿದರು.

ಮಾಹಿತಿಗೆ www.mypadnow.com/ncpa2023 ಅಥವಾ bnsacademy64@gmail.com ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT