ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಮಟ್ಟದ ಪಿಯು ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜು ಚಾಂಪಿಯನ್

Published 10 ಡಿಸೆಂಬರ್ 2023, 10:06 IST
Last Updated 10 ಡಿಸೆಂಬರ್ 2023, 10:06 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿ ಭಾನುವಾರ ಕೊನೆಗೊಂಡ ರಾಜ್ಯ ಪಿಯು ಬಾಲ್ ಬ್ಯಾಡ್ಮಿಂಟನ್ ಟೂರ್ನಿಯ ಬಾಲಕರ ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿದೆ.

ಬಾಲಕರ ಫೈನಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಚಿಕ್ಕಮಗಳೂರು ಜಿಲ್ಲೆಯನ್ನು 2:0 ಸೆಟ್ ಗಳಿಂದ ಸೋಲಿಸಿದರೆ, ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯನ್ನು 2:0 ಸೆಟ್‌ಗಳಿಂದ ಸೋಲಿಸಿ ಚಾಂಪಿಯನ್ ಆಯಿತು.

ಬಾಲಕರ ಸೆಮಿಫೈನಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಕೊಪ್ಪಳ ಜಿಲ್ಲೆಯನ್ನು 2:0 ಸೆಟ್‌ಗಳಿಂದ ಸೋಲಿಸಿದರೆ, ಚಿಕ್ಕಮಗಳೂರು ಜಿಲ್ಲೆ ಬಾಗಲಕೋಟೆ ಜಿಲ್ಲೆಯನ್ನು 2:0 ಸೆಟ್‌ಗಳಿಂದ ಸೋಲಿಸಿತ್ತು.

ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೈಸೂರು ಜಿಲ್ಲೆಯನ್ನು 2:0 ಸೆಟ್‌ಗಳಿಂದ ಹಾಗೂ ಉತ್ತರ ಕನ್ನಡ ಜಿಲ್ಲೆ ಹಾಸನ ಜಿಲ್ಲೆಯನ್ನು 2:0 ಸೆಟ್‌ಗಳಿಂದ ಸೋಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT