ಹೂವಿನಹಡಗಲಿ: ‘ತಾಲ್ಲೂಕು ಕೃಷಿ ಅವಲಂಬಿತ ಆಗಿರುವುದರಿಂದ ರೈತರಿಗೆ ಅನುಕೂಲವಾಗುವಂಥ ಕಾರ್ಯಕ್ರಮಗಳನ್ನು ಬಿಡಿಸಿಸಿ ಬ್ಯಾಂಕ್ ಜಾರಿಗೊಳಿಸಬೇಕು’ ಎಂದು ಶಾಸಕ ಎಲ್.ಕೃಷ್ಣನಾಯ್ಕ ಹೇಳಿದರು.

ತಾಲ್ಲೂಕಿನ ಉತ್ತಂಗಿ ಗ್ರಾಮದಲ್ಲಿ ಬುಧವಾರ ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 34ನೇ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.

‘ವಾರ್ಷಿಕ ₹ 3500 ಕೋಟಿ ವಹಿವಾಟು ನಡೆಸುತ್ತಿರುವ ಬಿಡಿಸಿಸಿ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್ ಮಾದರಿಯಲ್ಲಿ ಪ್ರಗತಿ ಸಾಧಿಸಿರುವುದು ಆಶಾದಾಯಕವಾಗಿದೆ’ ಎಂದು ಹೇಳಿದರು.

‘ಕೃಷಿಕರ ಎಲ್ಲ ಅಗತ್ಯಗಳು ಆಯಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಲಭ್ಯವಾಗುವಂತೆ ಕೇಂದ್ರ ಸಹಕಾರ ಇಲಾಖೆ ಕ್ರಾಂತಿಕಾರಕ ಯೋಜನೆ ಜಾರಿಗೊಳಿಸಿದೆ. ರೈತರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ರೈತರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವುದರಿಂದ ಹೆಚ್ಚಿನ ರೈತರಿಗೆ ಬ್ಯಾಂಕ್ ನಿಂದ ಸಾಲ, ಸೌಲಭ್ಯ ನೀಡಲು ಸಾಧ್ಯವಾಗುತ್ತದೆ. ನಮ್ಮ ತಂದೆ, ಎಂ.ಪಿ.ಪ್ರಕಾಶ್ ಅವರಿಗೆ ರಾಜಕೀಯ ಶಕ್ತಿ ನೀಡಿದ್ದ ಕ್ಷೇತ್ರದ ಜನರ ಜತೆ ನಮ್ಮ ಕುಟುಂಬ ಯಾವಾಗಲೂ ಇರಲಿದೆ. ಅವರ ಹೆಸರಿಗೆ ಕಪ್ಪು ಚುಕ್ಕೆ ತರದಂತೆ ಉತ್ತಮ ಆಡಳಿತ ನೀಡುವೆ’ ಎಂದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಐಗೋಳ ಚಿದಾನಂದ, ಪಿ.ವಿಜಯಕುಮಾರ್ ಮಾತನಾಡಿ, ಬ್ಯಾಂಕಿನ ಮಾಜಿ ಅಧ್ಯಕ್ಷ ಎಂ.ಪಿ.ರವೀಂದ್ರ ಅವರ ದೂರದೃಷ್ಟಿಯ ಫಲವಾಗಿ ತಾಲ್ಲೂಕಿನ ಎಲ್ಲ ಸಹಕಾರ ಸಂಘಗಳು ಸದೃಢವಾಗಿವೆ. ಅವರ ಆಶಯದಂತೆ ಗ್ರಾಮದಲ್ಲಿ ಶಾಖೆ ಪ್ರಾರಂಭವಾಗಿದೆ ಎಂದು ತಿಳಿಸಿದರು.

ಸೋಮಶಂಕರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಅಧ್ಯಕ್ಷತೆ ವಹಿಸಿದ್ದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ತಿಪ್ಪೇ ಸ್ವಾಮಿ, ಉಪಾಧ್ಯಕ್ಷ ದ್ವಾರಕೀಶ ಮಾತನಾಡಿದರು.

ನಿರ್ದೇಶಕರಾದ ಟಿ.ಎಂ. ಚಂದ್ರಶೇಖರಯ್ಯ, ಚೊಕ್ಕ ಬಸವನಗೌಡ, ಸಂದೀಪ ಸಿಂಗ್, ಆನಂದ, ಮೂಕಯ್ಯಸ್ವಾಮಿ, ವೈ.ಅಣ್ಣಪ್ಪ, ಹುಲುಗಪ್ಪ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಜಯಪ್ರಕಾಶ, ಕೊಟ್ರೇಶ, ಕನಕದಾಸ ಕುರಿ ಉಣ್ಣೆ ಸಹಕಾರ ಸಂಘದ ಅಧ್ಯಕ್ಷ ಕೆ.ಜಿ.ಹನುಮಂತಪ್ಪ, ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗೌರಮ್ಮ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-25-1959967882

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.