ಹೊಸಪೇಟೆ: ಜಿಲ್ಲೆಯ ವಸತಿ ರಹಿತ ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳು ಸರ್ಕಾರದ ವಿವಿಧ ವಸತಿ ಯೋಜನೆಗಳ ಲಾಭ ಪಡೆಯಲು ಮೇ 15ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ತಿಳಿಸಿದ್ದಾರೆ.

2018ರ ಸಮೀಕ್ಷಾ ಪಟ್ಟಿಯಲ್ಲಿರುವ ಅನರ್ಹರನ್ನು ಕೈಬಿಟ್ಟು, ಬಿಟ್ಟುಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರಿಸಲು ಅವಕಾಶ ನೀಡಲಾಗಿದೆ. 2026-27ನೇ ಸಾಲಿನ ಬಜೆಟ್ನಲ್ಲಿ ರಾಜ್ಯದಾದ್ಯಂತ ಬಿಎಲ್ಸಿ ಆಧಾರಿತ 1 ಲಕ್ಷ ಹೊಸ ಮನೆಗಳ ಗುರಿ ಹಂಚಿಕೆಯಾಗಿದ್ದು, ಆನ್ಲೈನ್ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಫಲಾನುಭವಿಗಳ ಆಯ್ಕೆ ನಡೆಯಲಿದೆ. ಹೀಗಾಗಿ ಅರ್ಹ ವಸತಿ ರಹಿತರ ಹೆಸರನ್ನು ಪಟ್ಟಿಗೆ ಸೇರಿಸಲು ಇದೇ ಮೇ 15 ಕೊನೆಯ ದಿನ. ನಂತರ ಪಟ್ಟಿಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಪ್ರಕ್ರಿಯೆಯನ್ನು ಕಾಲಮಿತಿಯೊಳಗೆ ಆಂದೋಲನದ ಮಾದರಿಯಲ್ಲಿ ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ತಾ.ಪಂ ಇಒಗಳಿಗೆ ಸೂಚನೆ ನೀಡಲಾಗಿದೆ. ವಸತಿ ರಹಿತ ಸಾರ್ವಜನಿಕರು ತಕ್ಷಣವೇ ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಸಿಇಒ ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-25-499999742

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.