ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಪೇಟೆ: ಕೆಂಪೇಗೌಡ ಜಯಂತಿ ಆಚರಣೆಗೆ ಬಿಬಿಪಿಎಂಯಿಂದ ಅನುದಾನ

Published 25 ಜೂನ್ 2024, 16:03 IST
Last Updated 25 ಜೂನ್ 2024, 16:03 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಾಡಪ್ರಭು ಕೆಂಪೇಗೌಡರ ಜಯಂತಿ ಜೂನ್‌ 27ರಂದು ನಡೆಯಲಿದ್ದು, ಪ್ರತಿ ತಾಲ್ಲೂಕುಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಗಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧಾ ಜಿ. ಅವರು ಸೋಮವಾರ ವಿಡಿಯೊ ಸಂವಾದ ಮೂಲಕ ಕಾರ್ಯಕ್ರಮ ಹೇಗಿರಬೇಕು ಎಂಬ ಬಗ್ಗೆ ಸೂಚನೆ ನೀಡಿದರು.  ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಡ್ಡಾಯ ಕೆಂಪೇಗೌಡರ ಜಯಂತಿಯನ್ನು ವಿಶೇಷವಾಗಿ ಆಚರಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ (ಬಿಬಿಎಂಪಿ) ₹1 ಲಕ್ಷ ಅನುದಾನ ಬಿಡುಗಡೆ ಆಗಲಿದೆ, ಅದರಂತೆ ಜಯಂತಿ ಆಚರಣೆಗೆ ಕ್ರಮವಹಿಸಬೇಕು ಎಂದು ಎಲ್ಲ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT