ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಗಣಕೀಕರಣಗೊಳಿಸಿ ಇ–ಕೆಸಿಸಿ ಯೋಜನೆ ರೂಪಿಸಲಾಗುವುದು. ಉಭಯ ಜಿಲ್ಲೆಗಳಲ್ಲಿ 14 ಹೊಸ ಶಾಖೆಗಳನ್ನು ಆರಂಭಿಸಲು ಆರ್‌ಬಿಐನಿಂದ ಪರವಾನಗಿ ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆಫ್‌ಸೈಟ್ ಎಟಿಎಂಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಕೆ.ತಿಪ್ಪೇಸ್ವಾಮಿ ತಿಳಿಸಿದರು.