ಸೋಮವಾರ, ಏಪ್ರಿಲ್ 19, 2021
23 °C

ಮನಸೂರೆಗೊಳಿಸಿದ ತಾಳಮದ್ದಳೆ, ಭರತನಾಟ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ಕರ್ನಾಟಕ ಕಲಾಭಿಮಾನಿ ಸಂಘದಿಂದ ಸೋಮವಾರ ನಗರದ ಶಂಕರ್‌ ಆನಂದ್‌ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ತಾಳಮದ್ದಳೆ, ಭರತನಾಟ್ಯ ಕಾರ್ಯಕ್ರಮ ಮನಸೂರೆಗೊಳಿಸಿತು.

ಗಜಾನನ ಭಟ್ ತುಳಗೇರಿಮಠ, ಪ್ರಮೋದ್ ಹೆಗಡೆ ಯಲ್ಲಾಪುರ, ನರಸಿಂಹ ಹೆಗಡೆ ಮೂರೂರು, ಶಿವಾನಂದ ಹೆಗಡೆ ಕೆರೆಮನೆ, ನಾರಾಯಣ ಯಾಜಿ ಸಾಲೆಬೈಲು, ಅನಂತ ವೈದ್ಯ ಯಲ್ಲಾಪುರ, ಸೂರಾಲು ದೇವಿಪ್ರಸಾದ ತಂತ್ರಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜು ವಿದ್ಯಾರ್ಥಿನಿ ಗೀತಾ ಭರತನಾಟ್ಯ ಪ್ರಸ್ತುತಪಡಿಸಿದರು.

ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿದ ವಿಜಯನಗರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ‘ಕಲೆ, ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗ. ಅದನ್ನು ಉಳಿಸಿ, ಬೆಳೆಸಬೇಕು’ ಎಂದರು.

ಕಾಲೇಜಿನ ಪ್ರಾಂಶುಪಾಲ ಬಿ.ಜಿ ಕನಕೇಶಮೂರ್ತಿ, ಸಾಂಸ್ಕೃತಿಕ ವಿಭಾಗದ ಸಂಚಾಲಕ ನಾಗಣ್ಣ ಕಿಲಾರಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸಾಲಿ ಬಸವರಾಜ್, ಸಂಘದ ಅಧ್ಯಕ್ಷ ಮೋಹನ್ ಕುಂಟಾರ್, ವಿಜಯ ನಗರ ಕಾಲೇಜಿನ ಪ್ರಾಂಶುಪಾಲ ವಿ.ಎಸ್‌. ಪ್ರಭಯ್ಯ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು