ಶನಿವಾರ, ಅಕ್ಟೋಬರ್ 1, 2022
23 °C

ವಿಜಯನಗರ: ಎಸ್ಸಿ ಮೋರ್ಚಾದಿಂದ ಬೈಸಿಕಲ್ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಪರಿಶಿಷ್ಟ ಜಾತಿ (ಎಸ್ಸಿ) ಮೋರ್ಚಾದಿಂದ ಸೋಮವಾರ ನಗರದಲ್ಲಿ  'ಹರ್ ಘರ್ ತಿರಂಗಾ' ಬೈಸಿಕಲ್ ಜಾಥಾ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಸೈಕಲ್ ಜಾಥಾಗೆ ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಚಾಲನೆ ನೀಡಿದರು.

ಅಂಬೇಡ್ಕರ್ ವೃತ್ತದಿಂದ ಸೈಕಲ್‌ಗಳಲ್ಲಿ ತ್ರಿವರ್ಣ ಧ್ವಜ ಕಟ್ಟಿಕೊಂಡು ಕಾಲೇಜು ರಸ್ತೆ, ನಾಗಪ್ಪ ಕಟ್ಟೆ, ಸಾಯಿಬಾಬಾ ವೃತ್ತ, ಎಪಿಎಂಸಿ ವೃತ್ತ, ವಾಲ್ಮೀಕಿ ವೃತ್ತ, ಮದಕರಿ ನಾಯಕ ವೃತ್ತದವರೆಗೆ ಘೋಷಣೆಗಳನ್ನು ಕೂಗುತ್ತ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡರು.

ನಗರಸಭೆ ಉಪಾಧ್ಯಕ್ಷ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಸದಸ್ಯ ಜೀವರತ್ನಂ, ಬಿಜೆಪಿ ಮಂಡಲಾಧ್ಯಕ್ಷ ಕಾಸಿಟ್ಟಿ ಉಮಾಪತಿ, ಪ್ರಧಾನ ಕಾರ್ಯದರ್ಶಿ ಶಂಕರ್ ಮೇಟಿ, ಕವಿತಾ ಈಶ್ವರ್ ಸಿಂಗ್, ಎಸ್ಸಿ ಮೋರ್ಚಾ ಅಧ್ಯಕ್ಷ ರಾಘವೇಂದ್ರ ಜೆ.ಬಿ., ಸಿದ್ಧಾರ್ಥ್ ಸಿಂಗ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು