ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ತಡೆಗೋಡೆಗೆ ಬೈಕ್ ಡಿಕ್ಕಿ : ಇಳಕಲ್‌ನ ಇಬ್ಬರ ಸಾವು

Published 23 ಮೇ 2024, 11:40 IST
Last Updated 23 ಮೇ 2024, 11:40 IST
ಅಕ್ಷರ ಗಾತ್ರ

ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶದ ಗುಂಡಾ ಸಸ್ಯೋದ್ಯಾನ ಬಳಿಯ ರಾಷ್ಟ್ರೀಯ ಹೆದ್ದಾರಿ -50ರ ಬದಿಯಲ್ಲಿ ನಿರ್ಮಿಸಿದ ತಡೆಗೋಡೆಗೆ ಗುರುವಾರ ಬೆಳಿಗ್ಗೆ ಬೈಕ್ ಡಿಕ್ಕಿ ಹೊಡೆದುದಿಂದ ಬಾಗಲಕೋಟೆ ಜಿಲ್ಲೆಯ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಇಳಕಲ್ ತಾಲ್ಲೂಕಿನ ಶಶಿಕಾಂತ್ ಪೊಲೀಸ್ ಪಾಟೀಲ್ (26) ಹಾಗೂ ಜಗದೀಶ್ ಗುರಿಕಾರ್ (26) ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಇಬ್ಬರು ಬೆಂಗಳೂರಿನಿಂದ ಇಳಕಲ್‌ಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ತಡೆಗೋಡೆ ಆಚೆಯ ಹಿನ್ನೀರು ಪ್ರದೇಶದಲ್ಲಿ ಬಿದ್ದಿದ್ದಾರೆ. ಜಗದೀಶ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡ ಶಶಿಕಾಂತ್ ಅವರು ಬಳ್ಳಾರಿಯ ವಿಮ್ಸ್ ನಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಮರಿಯಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT