ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಲಾರಿ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

Last Updated 6 ಅಕ್ಟೋಬರ್ 2021, 15:20 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ತಾಲ್ಲೂಕಿನ ಪಾಪಿನಾಯಕನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬುಧವಾರ ಸಂಜೆ ಬೈಕಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಲ್ಲೂಕಿನ ಕೊಂಡನಾಯಕನಹಳ್ಳಿಯ ಉದಯ್ ಇಂಗಳಗಿ (25) ಮೃತರು.

‘ಉದಯ್‌, ಪಾಪಿನಾಯಕನಹಳ್ಳಿಯಿಂದ ಇಂಗಳಗಿಗೆ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಅತಿ ವೇಗದಲ್ಲಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವವಾಗಿ ಉದಯ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಗಾದಿಗನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT