ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | ಮತದಾನ ಜಾಗೃತಿ: ಸಿಇಒ ನೇತೃತ್ವದಲ್ಲಿ ಬೈಕ್ ರ‍್ಯಾಲಿ

Published 5 ಮೇ 2024, 16:12 IST
Last Updated 5 ಮೇ 2024, 16:12 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯಿತಿ ಹಾಗೂ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಭಾನುವಾರ ಇಲ್ಲಿ ಮತದಾನದ ಜಾಗೃತಿಗಾಗಿ ಬೈಕ್ ರ‍್ಯಾಲಿ ನಡೆಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ. ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಆವರಣದಿಂದ ಹೊರಟ ಬೈಕ್ ರ‍್ಯಾಲಿಯು ಟಿ.ಬಿ.ಡ್ಯಾಮ್ ರಸ್ತೆ, ಟಿ.ಎಸ್.ಪಿ.ಕಾಲೋನಿ, ನಿಶಾನಿ ಕ್ಯಾಂಪ್, ಬಲ್ಡೋಟಾ ರಸ್ತೆ, ಸಾಯಿಬಾಬಾ ವೃತ್ತ, ಅಮರಾವತಿ ರಸ್ತೆ, ಪಟೇಲ್ ನಗರ, ವಿಜಯನಗರ ಕಾಲೇಜ್ ರಸ್ತೆ, ಹಾಗೂ ಪುನಿತ್‌ ರಾಜ್‌ಕುಮಾರ್ ಸರ್ಕಲ್ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.

‘ಮತದಾನ ನಮ್ಮ ಹಕ್ಕು, ತಪ್ಪದೇ ಮತ ಚಲಾಯಿಸಿ’, ‘ನೈತಿಕ ಮತದಾನ ಮಾಡಿ’, ‘ಮತದಾನ ಪ್ರತಿಯೊಬ್ಬ ನಾಗರಿಕರ ಕರ್ತವ್ಯ’, ‘ನನ್ನ ಮತ ಮಾರಾಟಕ್ಕಿಲ್ಲ’ ಎನ್ನುವ ಘೋಷಣೆಗಳೊಂದಿಗೆ ಸಾರ್ವಜನಿಕರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.

ಇದಕ್ಕೂ ಮೊದಲು ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಸಿಇಒ, 2019ರ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಕಡೆಗಳಲ್ಲಿ ಬರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕಡ್ಡಾಯವಾಗಿ ಮತದಾನ ಮಾಡಿ ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ವಿಜಯನಗರ ಜಿಲ್ಲೆಯ ಮಾಜಿ ಸೈನಿಕರ ಸಂಘದ ಸಹಕಾರದೊಂದಿಗೆ ಬೈಕ್ ರ‍್ಯಾಲಿ ಆಯೋಜಿಸಲಾಗಿದೆ. ಮೇ 7ರಂದು ಪ್ರತಿಯೊಬ್ಬರೂ ತಪ್ಪದೇ ಮತಗಟ್ಟೆ ಹೋಗಿ ಅಮೂಲ್ಯವಾದ ಮತವನ್ನು ಚಲಾಯಿಸಬೇಕು ಎಂದರು.

ನಗರಸಭೆ ಪೌರಾಯುಕ್ತ ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಅಶೋಕ್ ಜಿ.ತೋಟದ್, ಸಹಾಯಕ ಯೋಜನಾಧಿಕಾರಿ ಲಕ್ಷೀಕಾಂತ್, ಸಾಂಖ್ಯಿಕ ಹಾಗೂ ಮೌಲ್ಯಮಾಪನ ಅಧಿಕಾರಿ ಪತ್ರಿಬಸಪ್ಪ, ಅಧೀಕ್ಷಕ ಬಾಬು, ಜಿಲ್ಲಾ ಮಾಜಿ ಸೈನಿಕ ಸಂಘದ ಅಧ್ಯಕ್ಷ ಮಂಜುನಾಥ್, ಪದಾಧಿಕಾರಿಗಳಾದ ಜಿ.ವಿಶ್ವನಾಥ್, ಸುಬ್ಬಣ್ಣ ಪಿ., ಕುಲಕರ್ಣಿ, ಅಯ್ಯಪ್ಪ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT