ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ವೇತನಕ್ಕೆ ಬಿಸಿಯೂಟ ನೌಕರರ ಆಗ್ರಹ

Last Updated 18 ಮೇ 2022, 12:33 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕನಿಷ್ಠ ವೇತನ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ಕಾರ್ಯಕರ್ತೆಯರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್‌ ಗುರುಬಸವರಾಜ ಅವರಿಗೆ ಸಲ್ಲಿಸಿದರು.

ಫೆಡರೇಷನ್ ಜಿಲ್ಲಾಧ್ಯಕ್ಷೆ ಎಚ್.ಅನುಸೂಯ ಮಾತನಾಡಿ, 20 ವರ್ಷಗಳಿಂದ ಶಾಲೆಗಳಲ್ಲಿ ದುಡಿಯುತ್ತಿರುವ ಬಿ‌ಸಿಯೂಟ ತಯಾರಕರಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು. ಸೇವೆ ಕಾಯಂಗೊಳಿಸಲು ಸರ್ಕಾರ ಮುಂದಾಗಬೇಕು. ಬಿಸಿಯೂಟ ಯೋಜನೆಯಲ್ಲಿ ದುಡಿಯುತ್ತಿರುವವರನ್ನು ಕಾರ್ಮಿಕರೆಂದೇ ಪರಿಗಣಿಸಿಲ್ಲ ಎಂದರು.

ಸಲಹಾ ಸಮಿತಿ ಸದಸ್ಯ ಎಚ್.ವೀರಣ್ಣ ಮಾತನಾಡಿ, ಬಿಸಿಯೂಟ ತಯಾರಿಕೆ ಮತ್ತು ಪೂರೈಕೆಯನ್ನು ಖಾಸಗಿ ಸಂಸ್ಥೆಗೆ ವಹಿಸುವ ಹುನ್ನಾರ ನಡೆದಿದೆ. ಸರ್ಕಾರ ಈ ಯೋಚನೆಯನ್ನು ಕೈಬಿಡಬೇಕು. ಬಿಸಿಯೂಟ ತಯಾರಕರಾಗಿ ನಿವೃತ್ತಿ ಹೊಂದಿದವರಿಗೆ ಪಿಂಚಣಿ ಒದಗಿಸಬೇಕು ಎಂದು ಆಗ್ರಹಿಸಿದರು.ಟಿ‌.ಎಂ.ರೂಪ, ಎ.ಪಿ‌.ಪುಷ್ಪ, ಜಿ.ಸುಜಾತ, ಗುಡಿಹಳ್ಳಿ ಹಾಲೇಶ್, ಹಲಗಿ ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT