ಶನಿವಾರ, ಅಕ್ಟೋಬರ್ 1, 2022
25 °C

ಬಿಜೆಪಿ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಭಾನುವಾರ ಸಂಜೆ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.

ನಗರದ ಅಭಯ ಆಂಜನೇಯ ದೇವಸ್ಥಾನದ ಬಳಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಚಾಲನೆ ನೀಡಿದರು. ನಂತರ ಮದಕರಿ ನಾಯಕ ವೃತ್ತ, ಗಾಂಧಿ ವೃತ್ತ, ಮೂರಂಗಡಿ ವೃತ್ತ, ಬಸ್ ನಿಲ್ದಾಣ, ಪುನೀತ್ ರಾಜಕುಮಾರ್ ವೃತ್ತದಿಂದ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದವರೆಗೆ ತ್ರಿವರ್ಣ ಧ್ವಜ ಹಾಗೂ ಪಂಜುಗಳನ್ನು ಹಿಡಿದುಕೊಂಡು ಹೆಜ್ಜೆ ಹಾಕಿದರು. ಘೋಷಣೆಗಳನ್ನು ಹಾಕಿದರು.

ಬಿಜೆಪಿ ಮಂಡಲ ಅಧ್ಯಕ್ಷ ಕಾಸೆಟ್ಟಿ ಉಮಾಪತಿ, ಪ್ರಧಾನ ಕಾರ್ಯದರ್ಶಿ ಶಂಕರ್ ಮೇಟಿ, ನಗರಸಭೆ ಸದಸ್ಯ ಜೀವರತ್ನಂ, ಸಾಲಿ ಸಿದ್ಧಯ್ಯ ಸ್ವಾಮಿ, ಕವಿತಾ ಈಶ್ವರ್ ಸಿಂಗ್, ಸಿದ್ಧಾರ್ಥ್ ಸಿಂಗ್ ಇತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.