ಹೊಸಪೇಟೆ (ವಿಜಯನಗರ): ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚೋದನಕಾರಿ ಭಾಷಣ ಮಾಡುವುದರ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ದಾರೆ, ಕೂಡಲೇ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಪಟ್ಟಣ ಠಾಣೆ, ಗ್ರಾಮೀಣ ಠಾಣೆ ಹಾಗೂ ಡಿವೈಎಸ್ಪಿ ಕಚೇರಿಗಳಿಗೆ ತೆರಳಿದ ಪ್ರತಿಭಟನಕಾರರು, ಖರ್ಗೆ ಬಂಧನಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ಆರ್ಎಸ್ಎಸ್ ಅನ್ನು ವಿಷಸರ್ಪ, ಅದನ್ನು ಕೊಲ್ಲಿ ಎಂಬರ್ಥದಲ್ಲಿ ಮಾತನಾಡಿದ್ದಾರೆ, ಇಂತಹ ಹೇಳಿಕೆಯಿಂದ ದೇಶದಲ್ಲಿರುವ ಲಕ್ಷಾಂತರ ಬಿಜೆಪಿ ಮತ್ತು ಆರ್ಎಸ್ಎಸ್ ಸದಸ್ಯರ ಜೀವಕ್ಕೆ ಅಪಾಯ ಎದುರಾಗಿದೆ ಎಂದರು.

ಧಾರ್ಮಿಕ ಮತ್ತು ಸಮುದಾಯಗಳ ನಡುವಿನ ಸೌಹಾರ್ದತೆಗೆ ಸಂಬಂಧಿಸಿದ ಕಾನೂನಿನ ಸೆಕ್ಷನ್ 196 (ಹಳೆಯ ಐಪಿಸಿ 153ಎ ಬದಲಿಗೆ) ಈ ಪ್ರಕರಣಕ್ಕೆ ತಕ್ಕುದಾಗಿದೆ., ವಿವಿಧ ಧರ್ಮ, ಜನಾಂಗ, ಭಾಷೆ, ಪ್ರಾದೇಶಿಕ ಗುಂಪುಗಳು ಅಥವಾ ಸಮುದಾಯಗಳ ನಡುವೆ ದ್ವೇಷ, ಹಗೆತನ ಅಥವಾ ಕೆಟ್ಟ ಭಾವನೆಯನ್ನು ಉತ್ತೇಜಿಸುವುದನ್ನು ಇದು ನಿಷೇಧಿಸುತ್ತದೆ. ಇದರಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ಅಥವಾ ಸಾರ್ವಜನಿಕ ಶಾಂತಿಗೆ ಭಂಗ ತರುವ ಕೃತ್ಯಗಳೂ ಸೇರಿವೆ. ಅಲ್ಲದೇ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಪೊಲೀಸರು ಯಾವುದೇ ಔಪಚಾರಿಕ ದೂರುಗಳಿಗಾಗಿ ಕಾಯದೆ, ಇಂತಹ ಪ್ರಕರಣಗಳಲ್ಲಿ ಪೊಲೀಸರು ತಾವಾಗಿಯೇ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಿರುವುದನ್ನು ಗಮನಿಸಬೇಕು ಎಂದು ಅವರು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಧುರಚನ್ನ ಶಾಸ್ತ್ರಿ ಹಿರೇಮಠ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಎಚ್.ರಾಘವೇಂದ್ರ, ಕೆ. ಮಧುಸೂದನ್, ಗೌಳಿ ಬಸವರಾಜ್, ಹನುಮಂತಪ್ಪ, ವ್ಯಾಸರಾಜ್, ಇಮ್ತಿಯಾಜ್, ರೇವಣ ಸಿದ್ದಪ್ಪ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.