ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ

Last Updated 5 ಮೇ 2021, 13:36 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕೋವಿಡ್‌ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ನಗರದ ರೋಟರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಸೆಕ್ಷನ್‌ 144 ಕರ್ಫ್ಯೂ ಜಾರಿಯಲ್ಲಿರುವುದರಿಂದ ಜನ ಒಂದೆಡೆ ಗುಂಪು ಗೂಡುವಂತಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿದರು. ಎಲ್ಲರೂ ಮಾಸ್ಕ್‌ ಧರಿಸಿದ್ದರು. ಆದರೆ, ಅಂತರವಿರಲಿಲ್ಲ. ಪಟ್ಟಣ ಠಾಣೆಯ ಕೂಗಳತೆಯ ದೂರದಲ್ಲೇ ಇರುವ ರೋಟರಿ ವೃತ್ತದಲ್ಲಿ ಏಕಾಏಕಿ ಪ್ರತಿಭಟನೆ ನಡೆಸಿದ್ದರು.

‘ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದುಕೊಳ್ಳದೇ, ನಿಷೇಧಾಜ್ಞೆ ನಡುವೆ ಪ್ರತಿಭಟನೆ ನಡೆಸಿದ ಬಿಜೆಪಿಯ ಹತ್ತು ಕಾರ್ಯಕರ್ತರ ವಿರುದ್ಧ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ನಡೆಸಿದ್ದಾರೆ ಎನ್ನಲಾದ ಹಿಂಸಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟಿಎಂಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಳ್ಳಾರಿ ಜಿಲ್ಲೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ವೀರಾಂಜನೇಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶಂಕರ್ ಮೇಟಿ, ಉಪಾಧ್ಯಕ್ಷ ಕೆ.ಮಧುಸೂದನ್, ಬಿ.ಶಂಕರ್, ಕಾಸೆಟಿ ಉಮಾಪತಿ, ಕೆ.ಎಸ್. ಸತ್ಯನಾರಾಯಣ, ಶಿವಶಂಕರ್, ಗುಜ್ಜಲ್ ರಾಮಾಂಜಿನಿ, ಮದನ್ ಕುಮಾರ್, ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT