ವಿಜಯನಗರ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭ

ಹೊಸಪೇಟೆ (ವಿಜಯನಗರ): ನಗರದ ಭಟ್ರಹಳ್ಳಿ ಆಂಜನೇಯ ದೇವಸ್ಥಾನದ ಸಮೀಪ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ, ಗೋ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಹಾಗೂ ಬಿಜೆಪಿ ಬಾವುಟ ಹಾರಿಸುವುದರೊಂದಿಗೆ ಆರಂಭಗೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ವೇದಿಕೆ ಮೇಲೆ, ಮುಖ್ಯಮಂತ್ರಿ ಬೊಮ್ಮಾಯಿ, ಪಕ್ಷದ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಮುಜರಾಯಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಇದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.