ಹೊಸಪೇಟೆ (ವಿಜಯನಗರ): ‘ಹೊಟ್ಟೆ ಪಾಡಿಗೆ ದಲಿತರು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಪರಿಶಿಷ್ಟ ಜಾತಿ ತಾಲ್ಲೂಕು ಮೋರ್ಚಾ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂದೆ ಸೇರಿದ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ತಾಲ್ಲೂಕು ಅಧ್ಯಕ್ಷ ಜೆ.ಬಿ.ರಾಘವೇಂದ್ರ ಮಾತನಾಡಿ, ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆಂದು ಹೇಳುವ ಮೂಲಕ ಇಡೀ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ದಲಿತ ಮುಖ್ಯಮಂತ್ರಿ ಮಾಡುವ ಹಾದಿ ತಪ್ಪಿಸಿದ ಕುತಂತ್ರಿ ಅವರು. ದಲಿತಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಕೂಡಲೇ ದಲಿತರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಕಾರ್ಯದರ್ಶಿಗಳಾದ ಶಂಕರ್ ಮೇಟಿ, ಜೀವರತ್ನಂ, ಮುಖಂಡರಾದ ಮಧುಸೂದನ್, ಮಲ್ಲಪ್ಪ, ಪರಶುರಾಮ, ಚೈತ್ರಾ, ರೇಷ್ಮಾ, ಶಿವಶಂಕರ್, ಸಣ್ಣ ತಾಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.